ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS |4 JANUARY 2023
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಾರ್ಗಲ್ : ಪಟ್ಟಣ ಪಂಚಾಯಿತಿಗೆ ಕರ್ನಾಟಕ ಪವರ್ ಕಾರ್ಪೊರೇಷನ್ (ಕೆಪಿಸಿ) ಆಸ್ತಿ ತೆರಿಗೆ ಪಾವತಿ ಮಾಡಿಲ್ಲ. 3.33 ಕೋಟಿ ರೂ. ತೆರಿಗೆ ಬಾಕಿ ಇದೆ. ಇದನ್ನು ಪಾವತಿ ಮಾಡುವ ಬದಲು ನ್ಯಾಯಾಲಯದ ಮೆಟ್ಟಿಲೇರಿದೆ ಎಂದು ಜೋಗ – ಕಾರ್ಗಲ್ ಪಟ್ಟಣ ಪಂಚಾಯಿತಿ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
2005 ರಿಂದ 2023ರವರೆಗೆ ಕೆಪಿಸಿ ಒಟ್ಟು 3.33 ಕೋಟಿ ರೂ. ಆಸ್ತಿ ತೆರಿಗೆ ಪಾವತಿ ಮಾಡಬೇಕಿದೆ. ಆದರೆ ಈತನಕ ಪಟ್ಟಣ ಪಂಚಾಯಿತಿಗೆ ಆಸ್ತಿ ತೆರಿಗೆ ಪಾವತಿ ಮಾಡಿಲ್ಲ. ಇದರ ಬದಲು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ಬಾಕಿ ಇರುವ ತೆರಿಗೆ ಹಣವನ್ನು ಕೆಪಿಸಿಯಿಂದ ಕೊಡಿಸಬೇಕಾಗಿ ಪಟ್ಟಣ ಪಂಚಾಯಿತಿ ಮನವಿ ನಿಯೋಗ ಮನವಿ ಮಾಡಿತು.
ಶಾಸಕ ಹರತಾಳು ಹಾಲಪ್ಪ ನೇತೃತ್ವದಲ್ಲಿ ಜೋಗ – ಕಾರ್ಗಲ್ ಪಟ್ಟಣ ಪಂಚಾಯಿತಿ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೂರಕವಾಗಿ ಸ್ಪಂದಿಸಿದ್ದಾರೆ. ಪ್ರಕರಣ ಹಿಂಪಡೆಯುವಂತೆ ಸೂಚಿಸುವುದಾಗಿ ತಿಳಿಸಿದ್ದಾರೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಾಸಂತಿ ರಮೇಶ್ ತಿಳಿಸಿದ್ದಾರೆ.
ಇದನ್ನೂ ಓದಿ – ಹೊಸ ವರ್ಷ, ಶಿವಮೊಗ್ಗದ ಪ್ರವಾಸಿ ತಾಣಗಳಲ್ಲಿ ಜನಸಾಗರ, ಇಲ್ಲಿದೆ ಹೆಚ್ಚು ಜನ ಭೇಟಿ ನೀಡಿದ ಟಾಪ್ 3 ಟೂರಿಸ್ಟ್ ಸ್ಪಾಟ್
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಪಿ.ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷೆ ಲಕ್ಷ್ಮೀರಾಜು, ಸದಸ್ಯರಾದ ಲಲಿತಾ ಮಂಜುನಾಥ್, ಬಾಲಸುಬ್ರಹ್ಮಣ್ಯ, ಜಯಲಕ್ಷ್ಮಿ, ಎಸ್.ಹೆಚ್.ಜಗದೀಶ್ ಸೇರಿದಂತೆ ಹಲವರು ಇದ್ದರು.