ತಹಶೀಲ್ದಾರ್‌ ನೇತೃತ್ವದಲ್ಲಿ ದಾಳಿ, ಕಾರು ಸಹಿತ ಇಬ್ಬರು ಯುವಕರು ಅರೆಸ್ಟ್‌, ಏನಿದು ಕೇಸ್?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಸಾಗರ: ತಾಲೂಕಿನ ಅರಳಿಕೊಪ್ಪದಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 330 ಗ್ರಾಂ ಗಾಂಜಾವನ್ನು ತಹಸೀಲ್ದಾ‌ರ್‌ ಡಾ.ಆರ್.ಪ್ರತಿಭಾ ನೇತೃತ್ವದ ತಂಡ ಹಾಗೂ ನಗರ ಪೊಲೀಸ್ ಠಾಣೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.

➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಖಚಿತ ಮಾಹಿತಿ ಮೇರೆಗೆ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಿ, ಗಾಂಜಾ ಹಾಗೂ ಕಾರನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ.

Tahasildhar-Dr-Prathibha-team-raid-two-arrested

ತಾಲೂಕಿನಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ಸಹಿಸುವುದಿಲ್ಲ. ಅಕ್ರಮ ಗಾಂಜಾ ಸಾಗಣೆ ಮೂಲ ಹಾಗೂ ಕಿಂಗ್‌ ಪಿನ್‌ಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ತಹಸೀಲ್ದಾರ್ ಡಾ.ಆರ್.ಪ್ರತಿಭಾ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮ ಆಡಳಿತಾಧಿಕಾರಿ ಸಂತೋಷ್, ಸಮೇದ್, ಪೊಲೀಸ್ ಇನ್‌ಸ್ಪೆಕ್ಟರ್‌ ಪುಲ್ಲಯ್ಯ ರಾಥೋಡ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಇದ್ದರು.