ಶಿವಮೊಗ್ಗ ಲೈವ್.ಕಾಂ | SAGARA NEWS | 30 JUNE 2021
ಸಾಗರ ತಾಲೂಕು ಬ್ಯಾಕೋಡಿನಲ್ಲಿ ವೃದ್ಧ ದಂಪತಿ ಕೊಲೆ ಪ್ರಕರಣ ಆರೋಪಿಗಳ ಬಂಧನವಾಗದೆ ಇರುವುದಕ್ಕೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರೂರು ಹೋಬಳಿಯ ದ್ವೀಪದಲ್ಲಿ ಘಟನೆ ನಡೆದ ಮನೆಗೆ ಭೇಟಿ ನೀಡಿ, ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಜೋಡಿ ಕೊಲೆ ತನಿಖೆ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ | ಕತ್ತು ಕೊಯ್ದು ವೃದ್ಧ ದಂಪತಿಯ ಬರ್ಬರ ಹತ್ಯೆ, ಚಿನ್ನಾಭರಣ ವ್ಯಾಪಾರಿಯ ಕೊಲೆಯಿಂದ ಆತಂಕ
ಹಾಡಹಗಲೆ ಕೊಲೆಯಾಗಿ ಏಳು ತಿಂಗಳಾದರೂ ಕೊಲೆಗಾರರ ಬಂಧನವಾಗಿಲ್ಲ. ದ್ವೀಪದಂತ ಆಯಕಟ್ಟಿನ ಜಾಗದಲ್ಲಿ ಹೀಗಾದರೆ ಹೇಗೆ ಎಂದು ಪ್ರಶ್ನಿಸಿದರು. ಅಲ್ಲದೆ ದೂರವಾಣಿ ಮೂಲಕ ಜಿಲ್ಲಾ ರಕ್ಷಣಾಧಿಕಾರಿ ಅವರೊಂದಿಗೆ ಪ್ರಕರಣದ ತನಿಖೆಯ ಪ್ರಗತಿ ಕುರಿತು ಮಾತನಾಡಿದರು.
ಇದನ್ನೂ ಓದಿ | ಸಾಗರ ತಾಲೂಕು ಬ್ಯಾಕೋಡು ಜೋಡಿ ಕೊಲೆ, ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200