ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 26 ಆಗಸ್ಟ್ 2019
ಕಲ್ಲೊಡ್ಡು ಹಳ್ಳ ಯೋಜನೆ ವಿರೋಧಿಸಿ ಸಾಗರದಲ್ಲಿ ಭಾರಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರು ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸಾಗರದ ಗಣಪತಿ ದೇವಸ್ಥಾನದಿಂದ ಶುರುವಾದ ಮೆರವಣಿಗೆ ಉಪ ವಿಭಾಗಾಧಿಕಾರಿ ಕಚೇರಿವರೆಗೆ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಯೋಜನೆ ವಿರುದ್ಧ ಘೋಷಣೆ ಕೂಗಿದರು. ಯೋಜನೆ ಜಾರಿಯಾದರೆ ಸಾಗರ ತಾಲೂಕಿನಲ್ಲಿ ಮತ್ತೊಮ್ಮೆ ಮುಳುಗಡೆ ಸಮಸ್ಯೆ ಎದುರಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಟ್ಟಿಗೆ ಹೆಜ್ಜೆ ಹಾಕಿದ ಹಾಲಿ, ಮಾಜಿ ಶಾಸಕರು
ಕಲ್ಲೊಡ್ಡು ಹಳ್ಳ ವಿರೋಧಿ ಮೆರವಣಿಗೆಯ ಮುಂಚೂಣಿಯಲ್ಲಿ ಹಾಲಿ ಮತ್ತು ಮಾಜಿ ಶಾಸಕರು ಒಟ್ಟಿಗೆ ಕಾಣಿಸಿಕೊಂಡು, ಎಲ್ಲರ ಹುಬ್ಬೇರುವಂತೆ ಮಾಡಿದರು. ಶಾಸಕ ಹರತಾಳು ಹಾಲಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಒಟ್ಟಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಶರಾವತಿ ನದಿಗಾಗಿ ಮಾದರಿಯಲ್ಲಿ ಕಲ್ಲೊಡ್ಡು ಯೋಜನೆ ವಿರುದ್ಧ ಹೋರಾಟ ನಡೆಯುತ್ತಿದ್ದ ನಡೆಯುತ್ತಿದೆ. ಶರಾವತಿ ನದಿಗಾಗಿ ಹೋರಾಟ ಸಮಿತಿ ಅಧ್ಯಕ್ಷ, ಸಾಹಿತಿ ನಾ.ಡಿಸೋಜಾ ಅವರು ಕಲ್ಲೊಡ್ಡು ಯೋಜನೆಯಲ್ಲಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ, ಬೆಂಬಲ ಘೋಷಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200