SHIVAMOGGA LIVE NEWS
SHIMOGA| ನೇತ್ರ ತಜ್ಞ, ವೈದ್ಯಕೀಯ ವಿಜ್ಞಾನ ಬರಹಗಾರ ಸಾಗರದ ಡಾ. ಹೆಚ್.ಎಸ್. ಮೋಹನ್ ಅವರು ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. (award for doctor)
ವೈದ್ಯಕೀಯ ಕ್ಷೇತ್ರದ ಜೊತೆಗೆ ಸಮಾಜಮುಖಿ ಕಾರ್ಯದಲ್ಲಿಯು ಡಾ. ಹೆಚ್.ಎಸ್.ಮೋಹನ್ ತೊಡಗಿಸಿಕೊಂಡಿದ್ದಾರೆ. ವೈದ್ಯಕೀಯ ಬರಹಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿವುದು, ಕಣ್ಣಿನ ಆರೋಗ್ಯ ಕುರಿತು ಪುಸ್ತಕ, ಲೇಖನಗಳನ್ನು ಪ್ರಕಟಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
(award for doctor)
ವೈದ್ಯಕೀಯ ಸೇವೆ, ಬರಹಗಳು
ಡಾ. ಹೆಚ್.ಎಸ್.ಮೋಹನ್ ಅವರು ಮೂಲತಃ ಸೊರಬ ತಾಲೂಕು ಹೊಸಬಾಳೆಯವರು. ಮೈಸೂರು ಮತ್ತು ಮಣಿಪಾಲದಲ್ಲಿ ವೈದ್ಯಕೀಯ ಪದವಿ ಪಡೆದಿದ್ದಾರೆ. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಕೆಲಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಸದ್ಯ ಸಾಗರದಲ್ಲಿ ನೇತ್ರ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವೈದ್ಯಕೀಯ ಬರಹಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಕನ್ನಡ, ಇಂಗ್ಲೀಷ್, ಮಲಯಾಳಂ ಭಾಷೆಗಳ ಪತ್ರಿಕೆಗಳಿಗೆ ಹಲವು ಲೇಖನಗಳನ್ನು ಬರೆದಿದ್ದಾರೆ. ಅಂತಾರಾಷ್ಟ್ರೀಯ ವೆಬ್ ಸೈಟ್ ಗಳಲ್ಲಿಯು ಇವರ ಬರಹಗಳು ಪ್ರಕಟವಾಗಿವೆ. ‘ಕಣ್ಣು 106 ಪ್ರಶ್ನೆಗಳು’, ‘ಕಣ್ಣು ಮತ್ತು ದೃಷ್ಟಿ’ ಪುಸ್ತಕಗಳು ಜನಪ್ರಿಯವಾಗಿವೆ. ಹಲವು ಮರು ಮುದ್ರಣಗಳನ್ನು ಕಂಡಿವೆ. ಕನ್ನಡದಲ್ಲಿ 17, ಇಂಗ್ಲೀಷ್ ಭಾಷೆಯಲ್ಲಿ ಒಂದು ಕೃತಿ ಬರೆದಿದ್ದಾರೆ.
ಡಾ. ಹೆಚ್.ಎಸ್. ಮೋಹನ್ ಅವರು ಯಕ್ಷಗಾನದ ಕುರಿತು ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಹಲವು ಮೇಳಗಳನ್ನು ಆಯೋಜಿಸಿದ್ದಾರೆ. ಇನ್ನು ವಿವಿಧ ಸಾಮಾಜಿಕ ಸಂಘನೆಗಳ ಮೂಲಕ ವೈದ್ಯಕೀಯ ಶಿಬಿರಗಳನ್ನು ನಡೆಸಿ, ಹಲವರಿಗೆ ನೆರವಾಗಿದ್ದಾರೆ.
ಕ್ಲಿಕ್ ಮಾಡಿ ಇದನ್ನೂ ಓದಿ | ‘ಆಗ ನಾನೇ ತಪ್ಪು ಮಾಡಿಬಿಟ್ಟೆ, ಇಲ್ಲವಾಗಿದ್ದಲ್ಲಿ ಸಂಗಮೇಶ್ವರ್ ನನ್ನ ಸಂಪುಟದಲ್ಲಿ ಮಂತ್ರಿಯಾಗಿರುತ್ತಿದ್ದರು’
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.