ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA | 18 ಜನವರಿ 2020
ಕೆಎಫ್ಡಿ ನಿರೋಧಕ ಲಸಿಕೆ ಹಾಕಿಸಿಕೊಳ್ಳಲು ಜನ ಹಿಂದೇಟು ಹಾಕುತ್ತಿದ್ದು, ಅವರಲ್ಲಿ ಜಾಗೃತಿ ಮೂಡಿಸಲು ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಮತ್ತು ತುಮರಿ ಗ್ರಾಪಂ ಅಧ್ಯಕ್ಷ ಜಿ.ಟಿ. ಸತ್ಯನಾರಾಯಣ ಅವರು ಚುಚ್ಚುಮದ್ದು ಕಾರ್ಯಕ್ರಮದ ವೇದಿಕೆಯಲ್ಲೇ ಲಸಿಕೆ ಹಾಕಿಸಿಕೊಂಡರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾಗರ ತಾಲೂಕಿನಲ್ಲಿ ಈ ವರ್ಷ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಹಿಳೆಯೊಬ್ಬರು ಈಗಾಗಲೇ ಮೃತಪಟ್ಟಿದ್ದಾರೆ. ಆದರೆ ರೋಗ ನಿರೋಧಕ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದಾರೆ.
ಆರೋಗ್ಯ ಇಲಾಖೆ ಅಧಿಕಾರಿಗಳು ಎಷ್ಟೇ ತಿಳಿವಳಿಕೆ ನೀಡಿದರು ರೋಗನಿರೋಧಕ ಚುಚ್ಚುಮದ್ದು ಪಡೆಯಲು ಮುಂದಾಗುತ್ತಿಲ್ಲ. ಹೀಗಾಗಿ ಹಾಲಪ್ಪ ವೇದಿಕೆಯಲ್ಲೇ ಲಸಿಕೆ ಪಡೆಯುವ ಮೂಲಕ ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಿದರು.
ತಾಲೂಕಿನ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗನ ಕಾಯಿಲೆ ಲಸಿಕೆ ಮತ್ತು ಜಾಗೃತಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಿದ್ದ ಶಾಸಕ ಹರತಾಳು ಹಾಲಪ್ಪ ಮತ್ತು ತುಮರಿ ಗ್ರಾಪಂ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ ಅವರು ವೇದಿಕೆಯಲ್ಲೇ ಕೆಎಫ್ಡಿ ಲಸಿಕೆ ಹಾಕಿಸಿಕೊಂಡು ಕರೂರು, ಭಾರಂಗಿ ಹೋಬಳಿ ಭಾಗದ ಜನರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಡಿಎಚ್ಒ ಡಾ. ರಾಜೇಶ್ ಸುರಗೀಹಳ್ಳಿ, ಟಿಎಚ್ಒ ಡಾ. ಮುನಿವೆಂಕಟ ರಾಜು, ಕೆಎಫ್ಡಿ ವೈದ್ಯಾಧಿಕಾರಿ ಡಾ. ಕಿರಣ್ಕುಮಾರ್, ಡಾ.ಕೃಪಾ, ಬೊಬ್ಬಿಗೆ ನಾಗರಾಜ್, ಮಂಜಯ್ಯ ಜೈನ್ ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
Sagara MLA Haratalu Halappa Took KFD Injection in Sagara Tumari Village.