ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ, ತಪ್ಪಿತು ದೊಡ್ಡ ಅನಾಹುತ, ಘಟನೆಗೆ ಕಾರಣವೇನು?

SHIVAMOGGA LIVE | 4 AUGUST 2023

SAGARA : ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ರಸ್ತೆ ಬದಿ ಪಲ್ಟಿಯಾಗಿದೆ (Flip). ಘಟನೆಯಲ್ಲಿ ಚಾಲಕ, ನಿರ್ವಾಹಕ ಸೇರಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

KSRTC Bus upside at Ulluru in Sagara taluk

ಸಾಗರ ತಾಲೂಕು ಉಳ್ಳೂರು ಬಳಿ ಸಂಪಿಗೆಸರ ತಿರುವಿನಲ್ಲಿ ಮಧ್ಯಾಹ್ನ ಘಟನೆ (Flip) ಸಂಭವಿಸಿದೆ. ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸ್‌ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ – ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಅಪಘಾತ, ತಪ್ಪಿದ ದೊಡ್ಡ ಅನಾಹುತ

ಬಸ್ಸು ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತ್ತಿತ್ತು. ಗಾಯಗೊಂಡವರನ್ನು ತಕ್ಷಣ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿ ಹತ್ತಕ್ಕು ಹೆಚ್ಚು ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ. ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Kalleshwara-Enterprises.webp

PARISHRAMA neet academy

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment