ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 1 AUGUST 2023
TALAGUPPA : ಕಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ಬಸ್ (KSRTC BUS) ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸಾಗರ ತಾಲೂಕು ತಾಳಗುಪ್ಪ ಸಮೀಪದ ಬಲೇಗಾರು ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಶಿರಸಿ – ಸಾಗರ ಕೆಎಸ್‌ಆರ್‌ಟಿಸಿ ಬಸ್ ಅಪಘಾತಕ್ಕೀಡಾಗಿದೆ. ಎದುರಿನಿಂದ ವೇಗವಾಗಿ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕ ಎಡಗಡೆಗೆ ಬಸ್ ತಿರುಗಿಸಿದ್ದಾರೆ. ಇದರಿಂದ ಬಸ್ ಹೊಂಡಕ್ಕೆ ಜಾರಿದೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ನಡುರಾತ್ರಿ ಉಪನ್ಯಾಸಕನ ಮನೆಗೆ ನುಗ್ಗಲು ಯತ್ನಿಸಿದ ಯುವಕರ ಗುಂಪು, ಯುವತಿಗಾಗಿ ಶೋಧ, ಆಗಿದ್ದೇನು?
ಬಸ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ದೊಡ್ಡ ಅನಾಹುತ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.