ಶಿವಮೊಗ್ಗ ಲೈವ್
ಸಾಗರ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಆಕ್ಸೆಲ್ ಬ್ಲೇಡ್ ತುಂಡಾಗಿ ಬಸ್ ಪಲ್ಟಿಯಾಗಿದೆ. ಸಾಗರ ಪಟ್ಟಣದ ಬಾಪಟ್ ಕಲ್ಯಾಣ ಮಂಟಪ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಘಟನೆ ಸಂಭವಿಸಿದೆ. (ಈ ಸುದ್ದಿಯನ್ನು ಇನ್ನು 32 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಸಾಗರಕ್ಕೆ ಬರುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಬಸ್ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು. ಘಟನೆಯಲ್ಲಿ ಬಸ್ ಚಾಲಕ, ನಿರ್ವಾಹಕ ಸೇರಿದಂತೆ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ಸಿನ ಮುಂಬದಿಯ ಆಕ್ಸಲ್ ತುಂಡಾಗಿ ಬೇರ್ಪಟ್ಟಿದೆ. ಬಸ್ಸಿ ರಸ್ತೆಯ ಒಂದು ಬದಿಗೆ ಪಲ್ಟಿಯಾಗಿದೆ. ಹಾಗಾಗಿ ಈ ಮಾರ್ಗದಲ್ಲಿ ರಸ್ತೆಯ ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಕೆಎಸ್ಆರ್ಟಿಸಿ ಡಿಪೋದ ಮ್ಯಾನೇಜರ್ ಅರುಣ್ ಬೈಲೂರು ಭೇಟಿ ನೀಡಿ ಪರಿಶೀಲಿಸಿದರು.