ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಸಿಗಂದೂರು (Siganduru) ಸೇತುವೆ ಆದ ನಂತರ ಹಿನ್ನೀರು ಭಾಗದ ಮಹಿಳೆಯರು ನಮ್ಮ ಭಾಗಕ್ಕೆ ಸರ್ಕಾರಿ ಬಸ್ ಬರುತ್ತಿಲ್ಲ. ಇದರಿಂದ ಗ್ಯಾರಂಟಿ ಸೌಲಭ್ಯ ನಮಗೆ ಪಡೆಯಲು ಆಗುತ್ತಿಲ್ಲ ಎಂದು ದೂರಿದ್ದರು. ಇದನ್ನು ಮನಗಂಡು ಸಿಗಂದೂರಿಗೆ ನೂತನ ಬಸ್ ಸೌಲಭ್ಯ ಒದಗಿಸಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇಲ್ಲಿನ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಸಾಗರ – ಸಿಗಂದೂರು ಮತ್ತು ಸಾಗರ ನಗರ ಸಾರಿಗೆ ಬಸ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ತನಕ ಬಸ್ ಸೌಲಭ್ಯವನ್ನೇ ಕಾಣದ ಕುಗ್ರಾಮ ಮರಾಠಿಗೆ ಬಸ್ ಸೌಲಭ್ಯ ಸಿಕ್ಕಂತೆ ಆಗಿದೆ. ಜನರಿಗೆ ಸಾರಿಗೆ ಸಂಪರ್ಕ ಸಿಕ್ಕರೆ ಅವರ ಬದುಕು ಸುಧಾರಿಸುತ್ತದೆ ಎಂದು ತಿಳಿಸಿದರು.
ಒಂದು ನಗರ ಸಾರಿಗೆ ಆರಂಭ
ನಗರ ಸಾರಿಗೆಗಾಗಿ ಸಾರಿಗೆ ಸಚಿವರಿಗೆ ಮನವಿ ಮಾಡಿಕೊಂಡ ಮೇರೆಗೆ ಒಂದು ನಗರ ಸಾರಿಗೆ ಬಸ್‌ಗೆ ಅವಕಾಶ ಕಲ್ಪಿಸಿದ್ದಾರೆ. ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರು ಓಡಾಡಲು ಇದರಿಂದ ಅನುಕೂಲವಾಗಲಿದೆ. ರಾಮನಗರ, ಇಕ್ಕೇರಿ ವೃತ್ತ, ಜೋಗ ರಸ್ತೆ ಸೇರಿ ಬೇರೆಬೇರೆ ಭಾಗಗಳಲ್ಲಿ ನಗರ ಸಾರಿಗೆ ಸಂಚರಿಸಲಿದೆ. ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತವಾಗಿ ಸಂಚರಿಸಲು ಅವಕಾಶವಿದೆ ಎಂದು ಹೇಳಿದರು.
ಇದನ್ನೂ ಓದಿ – ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಡಬ್ಬಿ ಚಮತ್ಕಾರ, ಮರಳಾದರೆ ಚಿನ್ನಾಭರಣವೇ ಮಾಯ, ಏನಿದು?
ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಆರ್.ಜಯಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಸುರೇಶ್ ಬಾಬು, ಗಣಪತಿ ಮಂಡಗಳ, ಚೇತನರಾಜ್ ಕಣ್ಣೂರು ಮತ್ತಿತರರು ಹಾಜರಿದ್ದರು.

LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು





