ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಕೆಎಫ್‌ಡಿ ಅಟ್ಟಹಾಸ ಮುಂದುವರಿದಿದ್ದು, ಸೋಂಕಿಗೆ ತುತ್ತಾಗಿದ್ದ ಸಾಗರ ತಾಲೂಕಿನ 72 ವರ್ಷದ ವೃದ್ಧ ಗುರುವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ (death toll).
ಸಾಗರ ತಾಲೂಕಿನ ಮಂಜಿನಕಾನು ಹೀರೆಮನೆಯ ಮಂಜಪ್ಪ (72) ಮೃತಪಟ್ಟವರು. ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದ ಇವರನ್ನು ಏಪ್ರಿಲ್ 4 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಯ ವೇಳೆ ಕೆಎಫ್‌ಡಿ ಸೋಂಕು ದೃಢಪಟ್ಟ ಹಿನ್ನೆಲೆ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ನಾಲ್ಕಕ್ಕೇರಿದ ಸಾವಿನ ಸಂಖ್ಯೆ

2026ರ ಸಾಲಿನಲ್ಲಿ ಕೆಎಫ್‌ಡಿ ಸೋಂಕಿಗೆ ಬಲಿಯಾದವರ ಸಂಖ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ನಾಲ್ಕಕ್ಕೇರಿದೆ. ಈ ವರ್ಷ ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 85 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಮಲೆನಾಡಿಗರನ್ನು ಆತಂಕಕ್ಕೆ ತಳ್ಳಿದೆ.
ಇದನ್ನೂ ಓದಿ : KFD ಸೋಂಕಿಗೆ ಮೊದಲ ಬಲಿ, ತೀರ್ಥಹಳ್ಳಿಯ ಯುವಕ ಮಣಿಪಾಲದಲ್ಲಿ ಸಾವು
ಸದ್ಯ ಜಿಲ್ಲೆಯಲ್ಲಿ 11 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಸೋಂಕಿತರ ಮೇಲೆ ನಿಗಾ ಇರಿಸಿದ್ದಾರೆ.

LATEST NEWS
- ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

- ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನ

- ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

- ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

- ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು











