ಶಿವಮೊಗ್ಗ ಲೈವ್
ಸಾಗರ: ಬಿ.ಹೆಚ್. ರಸ್ತೆಯ ಎಸ್‌ಸಿ ಕಾಲೋನಿ ಎದುರು ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರಿಗೆ ಗಂಭೀರ ಪೆಟ್ಟಾಗಿದೆ. ಎಲ್.ಬಿ. ನಗರ ನಿವಾಸಿ ಸುಜಾತಾ ಗಾಯಗೊಂಡವರು. (ಈ ಸುದ್ದಿಯನ್ನು ಇನ್ನು 30 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಸುಜಾತಾ ಅವರು ಪರಿಚಿತರೊಬ್ಬರ ಜೊತೆಗೆ ಬೈಕಿನಲ್ಲಿ ಸಂತೆಗೆ ಹೋಗಿ ಮನೆಗೆ ಮರಳುತ್ತಿದ್ದರು. ಈ ವೇಳೆ ಆಲ್ಟೊ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕೆಳಗೆ ಬಿದ್ದ ಸುಜಾತಾ ಅವರ ಎಡಗಾಲಿನ ಮೂಳೆ ಮುರಿದಿದ್ದು, ತಲೆಗೆ ತೀವ್ರ ಪೆಟ್ಟು ಬಿದ್ದಿದೆ ಎಂದು ಆರೋಪಿಸಲಾಗಿದೆ. ಗಾಯಾಳುವನ್ನು ತಕ್ಷಣ ಸಾಗರ ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
