ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SAGARA NEWS, 24 OCTOBER 2024 : ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಮುಷ್ಕರ ಇವತ್ತು ಮಹತ್ವದ ಘಟ್ಟಕ್ಕೆ ತಲುಪಿದೆ. ದೊಡ್ಡ ಸಂಖ್ಯೆಯ ರೈತರು (Farmers) ಲಿಂಗನಮಕ್ಕಿ ಚಲೋ ಪಾದಯಾತ್ರೆ ನಡೆಸಿದರು.
ಕೆಳೆದ ಮೂರು ದಿನದಿಂದ ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ರೈತರು ಅಹೋರಾತ್ರಿ ಹೋರಾಟ ನಡೆಸುತ್ತಿದ್ದರು. ಆದರೆ ಸರ್ಕಾರ ಸೂಕ್ತ ಸ್ಪಂದನೆ ನೀಡದ ಹಿನ್ನೆಲೆ ರೈತರು ಈ ಹಿಂದೆ ಘೋಷಿಸಿದಂತೆ ಲಿಂಗನಮಕ್ಕಿ ಜಲಾಶಯದತ್ತ ಪಾದಯಾತ್ರೆ ಆರಂಭಿಸಿದರು. ಇವತ್ತು ತಾಳಗುಪ್ಪದವರೆಗೆ ಪಾದಯಾತ್ರೆ ಸಾಗಿತು.
ರೈತರ ಬೇಡಿಕೆಗಳು ಏನು?
ಮುಳುಗಡೆ ಸಂತ್ರಸ್ತರಿಗೆ, ಅರಣ್ಯ ಭೂಮಿ ಸಾಗುವಳಿದಾರರಿಗೆ ಭೂಮಿ ಹಕ್ಕು ನೀಡಬೇಕು. ಇದಕ್ಕಾಗಿ ಟಾಸ್ಕ್‌ಫೋರ್ಸ್ ರಚನೆ ಮಾಡಬೇಕು. ಭೂಮಿ ಹಕ್ಕಿನಿಂದ ವಂಚಿತವಾಗಿರುವ ರೈತರಿಗೆ ನ್ಯಾಯ ಸಿಗಬೇಕು ಎಂದು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ರೈತರು ಪಕ್ಷಾತೀತ ಹೋರಾಟ ಆರಂಭಿಸಿದ್ದಾರೆ.
ಕಳೆದ ಮೂರು ದಿನ ಏನೆಲ್ಲ ಆಯ್ತು?
ಅಕ್ಟೋಬರ್ 21 : ಸಾಗರದ ಮಹಾ ಗಣಪತಿ ದೇವಸ್ಥಾನದಿಂದ ರೈತರು ಮೆರವಣಿಗೆ ನಡೆಸಿದರು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೋರಾಟಕ್ಕೆ ಚಾಲನೆ ನೀಡಿದರು. ಸಾಗರ, ಸೊರಬ, ಹೊಸನಗರ, ಶಿವಮೊಗ್ಗ ತಾಲೂಕಿನ ರೈತರು ಹೋರಾಟದಲ್ಲಿ ಭಾಗವಹಿಸಿದ್ದರು. ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಸತ್ಯಾಗ್ರಹ ಆರಂಭಿಸಲಾಯಿತು.
ಅಕ್ಟೋಬರ್ 22 : ಜಿಲ್ಲಾಧಿಕಾರಿ ರಜೆ ಹಿನ್ನೆಲೆ ಜಿಲ್ಲಾ ಪಂಚಾಯಿತಿ ಸಿಇಒ ಹೇಮಂತ್ ಕುಮಾರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ಟಾಸ್ಕ್ ಫೊರ್ಸ್ ರಚನೆಗೆ ಜಿಲ್ಲಾಧಿಕಾರಿ ಅವರು ಸರ್ಕಾರಕ್ಕೆ ಪತ್ರ ಬರೆಯಲಿದ್ದಾರೆ. ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು. ಈ ಸಂದರ್ಭ ರೈತರು ಸಿಇಒಗೆ ಮುತ್ತಿಗೆ ಹಾಕಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇನ್ನು, ಸಂಸದ ರಾಘವೇಂದ್ರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಮಲೆನಾಡ ಸಂಸದರ ನಿಯೋಗ ಕೊಂಡೊಯ್ದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.
ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಗುಡ್ ನ್ಯೂಸ್ ನೀಡಿದ ಡಿಜಿಸಿಎ
ಅಕ್ಟೋಬರ್ 23 : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ಅಧಿಕಾರಿಗಳ ಜೊತೆಗೆ ಚರ್ಚಿಸುವ ಭರವಸೆ ನೀಡಿದರು. ಇನ್ನು, ಸರ್ಕಾರಗಳು ತಮ್ಮ ಬೇಡಿಕೆ ಈಡೇರಿಸುವತ್ತ ಗಮನ ಹರಿಸದ ಹಿನ್ನೆಲೆ ಲಿಂಗನಮಕ್ಕಿ ಚಲೋ ಮಾಡಲು ನಿರ್ಧಾರ ಘೋಷಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422