ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA NEWS | 24 ಜುಲೈ 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭಾರಿ ಮಳೆಯಿಂದಾಗಿ ಲಿಂಗನಮಕ್ಕಿ ಜಲಾಶಯಕ್ಕೆ ದೊಡ್ಡ ಪ್ರಮಾಣದಲ್ಲಿ ಒಳ ಹರಿವು ದಾಖಲಾಗಿದೆ. 14 ಗಂಟೆ ಅವಧಿಯಲ್ಲಿ ದಾಖಲೆ ಪ್ರಮಾಣದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಈ ನಡುವೆ ಕರ್ನಾಟಕ ವಿದ್ಯುತ್ ನಿಗಮದ ವತಿಯಿಂದ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಸಂದೇಶ ಬಿಡುಗಡೆ ಮಾಡಲಾಗಿದೆ.
ಶರಾವತಿ ಕೊಳ್ಳದಲ್ಲಿ ಭಾರಿ ಮಳೆಯಾದ ಹಿನ್ನೆಲೆ ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು ಲಕ್ಷ ಕ್ಯೂಸೆಕ್‍ಗೂ ಅಧಿಕ ನೀರು ಹರಿದು ಬಂದಿದೆ. ನೀರಿನ ಸಂಗ್ರಹ ಪ್ರಮಾಣದಲ್ಲಿ ಏರಿಕೆಯಾಗಿದೆ.
ಬೆಳಗ್ಗೆ 8 ಗಂಟೆಗೆ ಜಲಾಶಯದ ನೀರಿನ ಮಟ್ಟ 1799.15 ಅಡಿ ಇತ್ತು. ರಾತ್ರಿ 10 ಗಂಟೆಗೆ ನೀರಿನ ಮಟ್ಟ 1801.90 ಅಡಿಯಷ್ಟಿದೆ. 14 ಗಂಟೆ ಅವಧಿಯಲ್ಲಿ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 2.75 ಅಡಿಯಷ್ಟು ಏರಿಕೆಯಾಗಿದೆ.
ಕೆಪಿಸಿಯಿಂದ ಮುನ್ನೆಚ್ಚರಿಕೆ
ಜಲಾಶಯಕ್ಕೆ ಒಂದು ಲಕ್ಷ ಕ್ಯೂಸೆಕ್‍ಗೂ ಅಧಿಕ ಪ್ರಮಾಣದ ಒಳ ಹರಿವು ದಾಖಲಾಗಿದೆ. ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಲಾಶಯದ ನೀರಿನ ಮಟ್ಟ 1800.90 ಅಡಿಗೆ ತಲುಪಿದೆ. ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣದ ಅಧಿಕವಾದರೆ ಜಲಾಶಯಕ್ಕೆ ಬರುವ ಹೆಚ್ಚುವರಿ ನೀರನ್ನು ಹೊರಗೆ ಬಿಡಲಾಗುತ್ತದೆ. ಆದ್ದರಿಂದ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೆಪಿಸಿ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200