ಸಾಗರ:ಲೋಕಾಯುಕ್ತ (Lokayukta) ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಫೆಬ್ರವರಿ 24 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1ರವರೆಗೆ ಜಿಲ್ಲೆಯ ಸಾಗರ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದಾರೆ.
ಜಿಲ್ಲಾ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಮತ್ತು ಪೊಲೀಸ್ ನಿರೀಕ್ಷಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು ಈ ಸಭೆಗೆ ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವಲ್ಲಿ ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ, ದುರಾಡಳಿತ, ಸರ್ಕಾರಿ ಹಣ ಅಥವಾ ಅಧಿಕಾರ ದುರುಪಯೋಗ, ಕಳಪೆ ಕಾಮಾಗಾರಿ, ಸರ್ಕಾರಿ ನೌಕರರ ಅಕ್ರಮ ಆಸ್ತಿ ಸಂಪಾದನೆ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ದ ಲಿಖಿತವಾಗಿ ಅಹವಾಲು ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ