ಫೋನ್‌ ಪೇ ಮೂಲಕ ಹಣ ಪಡೆದ ಆರೋಪ, ಎಫ್‌ಡಿಎ ಲೋಕಾಯುಕ್ತ ಬಲೆಗೆ, ಏನಿದು ಪ್ರಕರಣ?

ಸಾಗರ: ಉಪವಿಭಾಗಾಧಿಕಾರಿ ನ್ಯಾಯಾಲಯದ ಆದೇಶ ಪ್ರತಿ ನೀಡಲು ಲಂಚದ ಬೇಡಿಕೆಯಿಟ್ಟು ಫೋನ್ ಪೇ ಮೂಲಕ ಹಣ ಪಡೆದಿದ್ದ ಪ್ರಥಮ ದರ್ಜೆ ಸಹಾಯಕ ಡಿ.ವಿ. ಗುರುರಾಯಾಚಾರ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. (ಈ ಸುದ್ದಿಯನ್ನು ಇನ್ನು 34 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಸಾಗರ ಎಸಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗುರುರಾಯಾಚಾರ್ಯ, ಕೋರ್ಟ್ ಆದೇಶದ ಪ್ರತಿ ನೀಡಲು ಮೈಸೂರು ಮೂಲದ ಅನಿತಾ ಜಿ. ಎಂಬುವವರಿಂದ ₹5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ಸಂತ್ರಸ್ತೆಯಿಂದ ₹2,100 ಹಣವನ್ನು ಫೋನ್ ಪೇ ಮಾಡಿಸಿಕೊಂಡಿದ್ದರು.

Lokayukta-Trap-a-FDA-at-Sagara-Assistant-Commissioner-Office

ಈ ಕುರಿತು ಮಹಿಳೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಮೇರೆಗೆ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದ ತಂಡ ಸಾಗರ ಉಪವಿಭಾಗಾಧಿಕಾರಿ ಕಚೇರಿ ಮೇಲೆ ದಾಳಿ ನಡೆಸಿ, ಎಫ್‌ಡಿಎ ಗುರುರಾಯಾಚಾರ್ಯ ಅವರನ್ನು ವಶಕ್ಕೆ ಪಡೆದುಕೊಂಡಿದೆ. ಲೋಕಾಯುಕ್ತ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: