ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 DECEMBER 2022
ಸಾಗರ : ಜೆಲ್ಲಿ ತುಂಬಿದ್ದ ಲಾರಿ ಡಿಕ್ಕಿ (lorry) ಹೊಡೆದು ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಒಬ್ಬಳಿಗೆ ಗಂಭೀರ ಗಾಯವಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದು ಬಂದಿದೆ.

ಸಾಗರ ಪಟ್ಟಣದ ಸಣ್ಣಮನೆ ಸೇತುವೆ ಬಳಿ ಘಟನೆ ಸಂಭವಿಸಿದೆ. ಹಾಸ್ಟೆಲ್ ನಿಂದ ಕಾಲೇಜಿಗೆ ನಡೆದು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ (lorry) ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಸಾಗರ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಸಾಗರ ಪಟ್ಟಣದಲ್ಲಿ ಲಾರಿಗಳ ಅತಿ ವೇಗಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು

CLICK & JOIN – SHIVAMOGGA LIVE COMMUNITY














