ಶಿವಮೊಗ್ಗ ಲೈವ್.ಕಾಂ | SAGARA | 18 ಫೆಬ್ರವರಿ 2020

ಶಕ್ತಿದೇವತೆ ಶ್ರೀ ಮಾರಿಕಾಂಬೆ ಜಾತ್ರೆಗೆ ಇವತ್ತು ಅದ್ಧೂರಿಯಾಗಿ ಚಾಲನೆ ನೀಡಲಾಯಿತು. 9 ದಿನಗಳ ಜರುಗುವ ತಾಯಿಯ ಜಾತ್ರೆಗೆ, ಬೆಳಗ್ಗೆ ಬ್ರಾಹ್ಮೀ ಮಹೂರ್ತದಲ್ಲಿ ಸಾಂಪ್ರಾದಾಯಿಕ ವಿಧಿ ವಿಧಾನಗಳು ನಡೆಯಿತು. ಮೊದಲ ದಿನವೇ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದರು.

ಬೆಳಗಿನ ಜಾವ 3 ಗಂಟೆಗೆ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯದಲ್ಲಿ ತಾಯಿ ಮಾರಿಕಾಂಬೆಯ ತಾಳಿ ಮತ್ತು ಆಭರಣಗಳಿಗೆ ಪೂಜೆ ಸಲ್ಲಿಸಿ ವಿಧಿವಿಧಾನ ನೇರವೇರಿಸಲಾಯಿತು. ನಂತರ ಪುರೋಹಿತ ರಮೇಶ ಭಟ್ಟರ ಮನೆಯಲ್ಲಿ ಪೂಜಾ ಕಾರ್ಯಕ್ರಮ ನಡೆದವು.
ದೇವಿಯ ಆಭರಣದ ಮೆರವಣಿಗೆ
ಮಂಗಳವಾದ್ಯಗಳೊಂದಿಗೆ ಸಾಗರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿ ಬಂದ ದೇವಿಯ ಆಭರಣಗಳನ್ನು ತವರುಮನೆಗೆ ತರಲಾಯಿತು. ತವರುಮನೆಯಲ್ಲಿ ಪ್ರತಿಷ್ಠಾಪಿಸಿದ್ದ ನಯನ ಮನೋಹರವಾದ ಶ್ರೀ ಮಾರಿಕಾಂಬೆ ವಿಗ್ರಹಕ್ಕೆ ವಿವಿಧ ಸಾಂಪ್ರಾದಾಯಿಕ ಆಚರಣೆಗಳನ್ನು ನಡೆಸಿ ಆಭರಣಗಳನ್ನು ತೊಡಿಸಲಾಯಿತು.
ತಾಯಿಯ ವಿಗ್ರಹಕ್ಕೆ ಭಾರಿ ಗಾತ್ರದ ಹಾರ ಸೇರಿದಂತೆ ವೈವಿಧ್ಯಮಯ ಹೂವಿನ ಅಲಂಕಾರ ನಡೆಸಿ ಮಹಾಮಂಗಳಾರತಿ ನೆರವೇರಿಸಲಾಯಿತು. ನಂತರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಮೆರವಣಿಗೆಯಲ್ಲಿ ಕೇರಳದ ಕಲಾತಂಡದವರು ಚಂಡೆವಾದನ ನಡೆಸಿಕೊಟ್ಟರು.

ನಾಳೆ ಗಂಡನ ಮನೆಗೆ ಮಾರಿಕಾಂಬೆ
ಫೆ. 19ರಿಂದ ಶ್ರೀ ಮಾರಿಕಾಂಬೆ ದೇವಿಯನ್ನು ಗಂಡನ ಮನೆ ಆವರಣದಲ್ಲಿ ಕೂರಿಸಲಾಗುತ್ತದೆ. ಫೆ. 26 ರವರೆಗೂ ಸಾರ್ವಜನಿಕರ ದರ್ಶನಕ್ಕೆ ಸಕಲ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರೀಕರಿಗೆ ಹಾಗೂ ವಿಕಲಚೇತನರಿಗೂ ಅನುಕೂಲವಾಗುವ ರೀತಿಯಲ್ಲಿ ಜಾತ್ರಾ ಸಮಿತಿ ಅಗತ್ಯ ಕ್ರಮ ಕೈಗೊಂಡಿದೆ.
ದೇವಿಯ ಹರಕೆ ಸಲ್ಲಿಸಲು ಜಾತ್ರಾ ಸಮಿತಿಯು ಪೂರಕ ಸಿದ್ಧತೆಗಳನ್ನು ಕೈಗೊಳ್ಳುತ್ತಿದೆ. ಉಡಿಸೇವೆ, ತುಲಾಭಾರ ಸೇರಿದಂತೆ ಭಕ್ತರು ಹರಕೆ ಸಲ್ಲಿಸಲು ಪ್ರತ್ಯೇಕ ಕೌಂಟರ್’ಗಳನ್ನು ಮಾಡಲಾಗಿದೆ.
ಜಾತ್ರೆಗೆ ಆಗಮಿಸುವ ಸಾರ್ವಜನಿಕರಿಗೆ ಜಾತ್ರಾ ಸಮಿತಿಯಿಂದ ಮಧ್ಯಾಹ್ನ ಮತ್ತು ರಾತ್ರಿ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ. ಸ್ಥಳೀಯ ಸಂಘ ಸಂಸ್ಥೆಗಳು ಸಹ ಉಚಿತವಾಗಿ ಪಾನೀಯ, ಉಪಾಹಾರ ಹಾಗೂ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಿರುತ್ತವೆ.

ನಿನ್ನೆ ರಾತ್ರಿಯಿಂದಲೇ ದರ್ಶನಕ್ಕೆ ಕ್ಯೂ
ತವರುಮನೆಯಲ್ಲಿ ಶ್ರೀ ಮಾರಿಕಾಂಬೆ ದರ್ಶನಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೋಮವಾರ ರಾತ್ರಿಯಿಂದಲೇ ಸರದಿ ಸಾಲಿನಲ್ಲಿ ನಿಂತಿದ್ದರು. ಸೋಮವಾರ ರಾತ್ರಿ 11ಕ್ಕೆ ನಿಧಾನವಾಗಿ ಜನ ಸೇರಲು ಆರಂಭಿಸಿದರು. ಬೆಳಗಿನ ಜಾವದ ವೇಳೆಗೆ ಸರದಿ ಸಾಲು ಸಾಗರ ಪಟ್ಟಣದ ಟೌನ್ ಪೊಲೀಸ್ ಠಾಣೆ ದಾಟಿ ಸೇವಾ ಸಾಗರ ಶಾಲೆವರೆಗೂ ತಲುಪಿತ್ತು.
ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ
ಕರ್ನಾಟಕದ ಅತಿದೊಡ್ಡ ಜಾತ್ರೆಗಳಲ್ಲಿ ಸಾಗರದ ಮಾರಿಕಾಂಬೆ ಜಾತ್ರೆಯು ಪ್ರಮುಖ. 16 ಅಡಿ ಎತ್ತರದ ತಾಯಿ ಮಾರಿಕಾಂಬೆ ಮೂರ್ತಿಯು ಅತ್ಯಂತ ವೈಶಿಷ್ಟವಾಗಿದ್ದು. ಎಲ್ಲ ಸಮುದಾಯದ ಜನರು ಒಟ್ಟುಗೂಡಿ ಪೂಜೆ ಸಲ್ಲಿಸುವುದು ವಿಶೇಷ. ಲಕ್ಷಾಂತರ ಭಕ್ತರು ಪಾಲ್ಗೊಳ್ಳುವುದರಿಂದ ಸಮಿತಿ ಸಕಲ ಕ್ರಮಗಳನ್ನು ಕೈಗೊಂಡಿದೆ ಎಂದು ಶ್ರೀ ಮಾರಿಕಾಂಬ ಜಾತ್ರಾ ಸಮಿತಿ ಖಜಾಂಚಿ ನಾಗೇಂದ್ರ ಎಸ್.ಕುಮುಟಾ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200