ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MAY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಾಗರದ ಶ್ರೀಧರಪುರದಲ್ಲಿ ಇತ್ತೀಚೆಗೆ ನಡೆದ ಮದುವೆ ಸಮಾರಂಭ ಕರೋನ ಸಂಕಷ್ಟದ ಕಾಲದಲ್ಲಿ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮೂಡಿಸಿದೆ. ಶಾಸಕ ಹರತಾಳು ಹಾಲಪ್ಪ ಅವರೆ ಈ ಕುರಿತು ಶಂಕೆ ವ್ಯಕ್ತಪಡಿಸಿದ್ದು, ತನಿಖೆಗೆ ಒತ್ತಾಯಿಸಿದ್ದಾರೆ.

ಏನಿದು ಪ್ರಕರಣ?
ಸಾಗರ ತಾಲೂಕು ಚಕ್ಕೂರಿನ ಶ್ರೀಧರಪುರದಲ್ಲಿ ಮದುವೆ ಸಮಾರಂಭದಲ್ಲಿ ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು ಎಂಬ ಆರೋಪವಿದೆ. ಅಧಿಕಾರಿಗಳ ಸಭೆಯಲ್ಲಿ ಈ ವಿಷಯವನ್ನು ಶಾಸಕ ಹರತಾಳು ಹಾಲಪ್ಪ ಪ್ರಸ್ತಾಪ ಮಾಡಿದರು.
ಕರೋನ ಸಂದರ್ಭದಲ್ಲಿ ಇಷ್ಟೊಂದು ಜನರು ಸೇರಿರುವ ಕುರಿತು ಮಾಹಿತಿ ನೀಡಲಾಗಿತ್ತು. ಆದರೆ ಅಧಿಕಾರಿಯೊಬ್ಬರು ಬೇರೊಂದು ಮನೆಯ ಫೋಟೊ ತೆಗೆದು ಜಿಲ್ಲಾಧಿಕಾರಿಗೆ ಕಳುಹಿಸಿ, ಅಲ್ಲೇನು ಆಗಿಲ್ಲ ಎಂದು ತಿಳಿಸಿದ್ದಾರೆ ಎಂದು ಶಾಸಕ ಹರತಾಳು ಹಾಲಪ್ಪ ಆರೋಪಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಮೂರನೆ ವ್ಯಕ್ತಿಯಿಂದ ಈ ಕುರಿತು ತನಿಖೆ ನಡೆಸಲಾಗುತ್ತದೆ. ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು.
ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟದಲ್ಲಿನ ನಂಬರ್ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






