ಶಿವಮೊಗ್ಗ ಲೈವ್.ಕಾಂ | SAGARA NEWS | 4 ಜುಲೈ 2020
ಇವತ್ತು ರಾತ್ರಿ 8 ಗಂಟೆಯಿಂದ ಕರ್ಪ್ಯೂ ವಿಧಿಸಲಾಗುತ್ತಿದ್ದು, ಅನಗತ್ಯವಾಗಿ ಹೊರಗೆ ಓಡಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಪ ವಿಭಾಗಾಧಿಕಾರಿ ಡಾ.ನಾಗರಾಜ್ ತಿಳಿಸಿದ್ದಾರೆ.

ಶಾಸಕ ಹರತಾಳು ಹಾಲಪ್ಪ ನೇತೃತ್ವದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಕಟ್ಟುನಿಟ್ಟು ಕ್ರಮಗಳ ಕುರಿತು ವಿವರಿಸಿದ ಡಾ.ನಾಗರಾಜ್, ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಇರಲಿದೆ. ಹಾಲು, ಔಷಧಿ ಅಂಗಡಿಗಳು ಮಾತ್ರ ಲಾಕ್ ಡೌನ್ನಿಂದ ವಿನಾಯಿತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಸಾಗರದಲ್ಲಿ ಕಂಪ್ಲೀಟ್ ಲಾಕ್ ಡೌನ್ ಮಾಡಲಾಗುತ್ತದೆ. ನಿಯಮ ಉಲ್ಲಂಘಿಸಿದವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.
ಡಿವೈಎಸ್ಪಿ ವಿನಾಯಕ್, ತಹಶೀಲ್ದಾರ್ ಚಂದ್ರಶೇಖರ್, ನಗರಸಭೆ ಆಯುಕ್ತ ನಾಗಪ್ಪ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200