ಸಾಗರ : ಮಾ.30 ರಿಂದ ಏ.5ರವರೆಗೆ ಸಾಗರದ ಇತಿಹಾಸ ಪ್ರಸಿದ್ಧ ಮಹಾಗಣಪತಿ ದೇವರ ಜಾತ್ರಾ (Jathre) ಮಹೋತ್ಸವ ನಡೆಯಲಿದೆ. ಇದರ ಸಿದ್ಧತೆಗಾಗಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಜನಪ್ರತಿನಿಧಿಗಳು, ಅಧಿಕಾರಿಗಳು, ದೇವಸ್ಥಾನ ಸಮಿತಿಯವರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪ್ರಭಾರ ಉಪ ವಿಭಾಗಾಧಿಕಾರಿ ರಶ್ಮಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಪೂರ್ವ ಸಿದ್ಧತೆ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಏನೆಲ್ಲ ಚರ್ಚೆಯಾಯ್ತು?
ಈ ಬಾರಿಯು ಅದ್ಧೂರಿಯಾಗಿ ಮಹಾಗಣಪತಿ ದೇವರ ಜಾತ್ರೆ ನಡೆಯಲಿದೆ. ಏ.1ರಂದು ದೇವರ ಮಹಾಸ್ಯಂದನ ರಥೋತ್ಸವ ನಡೆಯಲಿದೆ. ಜಾತ್ರೆ ಅಂಗವಾಗಿ ದೇವಸ್ಥಾನದ ಸಮೀಪ ಅಮ್ಯೂಸ್‌ಮೆಂಟ್ ಪಾರ್ಕ್, ಶುದ್ಧ ಕುಡಿಯುವ ನೀರು ಪೂರೈಕೆ, ಸ್ವಚ್ಛತೆ ಕುರಿತು ಚರ್ಚೆ ನಡೆಸಲಾಯಿತು. ಪಾರದರ್ಶಕವಾಗಿ ಸ್ಟಾಲ್‌ಗಳ ಹರಾಜ ಪ್ರಕ್ರಿಯೆ ನಡೆಸಬೇಕು ಎಂದು ಉಪ ವಿಭಾಗಾಧಿಕಾರಿ ಸೂಚಿಸಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ನಿನ್ನೆಗಿಂತಲು ಒಂದು ಡಿಗ್ರಿ ಹೆಚ್ಚಿರುತ್ತೆ ತಾಪಮಾನ, ಉಳಿದ ತಾಲೂಕುಗಳಲ್ಲಿ ಎಷ್ಟಿರುತ್ತೆ ಉಷ್ಣಾಂಶ?
ಮಹಾಗಣಪತಿ ದೇವರ ಜಾತ್ರೆಯನ್ನು ಅದ್ಧೂರಿಯಾಗಿ ನಡೆಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿದೆ. ಜಾತ್ರೆಯ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ.
– ರಶ್ಮಿ, ಪ್ರಭಾರ ಉಪ ವಿಭಾಗಾಧಿಕಾರಿ
ಸರ್ಕಾರದ ಅನುದಾನದ ಜೊತೆಗೆ ಸ್ಥಳೀಯವಾಗಿ ಸಂಪನ್ಮೂಲ ಕ್ರೋಢಿಕರಣ ಮಾಡಿಕೊಳ್ಳಲಾಗುತ್ತಿದೆ. ಜಾತ್ರೆಯ ಯಶಸ್ಸಿಗೆ ಸಂಘ ಸಂಸ್ಥೆಗಳು, ಅಧಿಕಾರಿಗಳು, ಜನ ಸಹಕಾರ ಬೇಕು.
– ಚಂದ್ರಶೇಖರ ನಾಯ್ಕ್, ತಹಶೀಲ್ದಾರ್
ಸಭೆಯಲ್ಲಿ ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಉಪಾಧ್ಯಕ್ಷೆ ಸವಿತಾ ವಾಸು, ಪ್ರಮುಖರಾದ ಟಿ.ವಿ.ಪಾಂಡುರಂಗ, ಕೆ.ಎನ್.ನಾಗೇಂದ್ರ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ ಸೇರಿದಂತೆ ಹಲವರು ಸಭೆಯಲ್ಲಿದ್ದರು.

ಇದನ್ನೂ ಓದಿ » ಭದ್ರಾವತಿ MPM ಕುರಿತು ಬೆಂಗಳೂರಿನಲ್ಲಿ ಮಹತ್ವದ ಮೀಟಿಂಗ್, ಏನೇನು ಚರ್ಚೆಯಾಯ್ತು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200