ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ : ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಾಗರ ತಾಲೂಕು ಭಾರಂಗಿ ಹೋಬಳಿಯಲ್ಲಿ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ನಿರಂತರ ಸಿಂಗಲ್ ಫೇಸ್ ವಿದ್ಯುತ್ (Power) ಪೂರೈಕೆ ಮಾಡಬೇಕು ಎಂದು ಹುಬ್ಬಳ್ಳಿಯ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮನವಿ ಮಾಡಿದ್ದಾರೆ.
ಭಾರಂಗಿ ಹೋಬಳಿಯ ನಾಗವಳ್ಳಿ ಭಾಗಕ್ಕೆ ಭಟ್ಕಳದಿಂದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ ಹಿನ್ನೆಲೆ ವಿದ್ಯಾರ್ಥಿಗಳ ಅಧ್ಯಯನಕ್ಕೆ ತೊಂದರೆ ಆಗದಂತೆ ಮಾರ್ಚ್ ತಿಂಗಳು ಪೂರ್ತಿ ಸಂಜೆ 6 ರಿಂದ ರಾತ್ರಿ 10 ಗಂಟೆವರೆಗೆ ಸಿಂಗಲ್ ಫೇಸ್ ವಿದ್ಯುತ್ ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ. ಇನ್ನು, ನಾಗವಳ್ಳಿ, ನೆಲಹರಿ, ಗುಡ್ಡೆಹಿತ್ಲು, ಬಾಳಿಗಾ ಭಾಗದಲ್ಲಿ ಸಾವಿರಕ್ಕೂ ಹೆಚ್ಚು ಕುಟುಂಬಗಳು ಕೃಷಿ ಮತ್ತು ತೋಟಗಾರಿಕೆಯಲ್ಲಿ ತೊಡಗಿವೆ. ಕಳೆದ ಮೂರು ತಿಂಗಳು ವಿದ್ಯುತ್ (Power) ಪೂರೈಕೆ ವ್ಯತ್ಯಯದಿಂದಾಗಿ ಜಮೀನಿಗೆ ನೀರು ಹಾಯಿಸಲಾಗದೆ ಬೆಳೆ ನಷ್ಟವಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಮನವಿಯಲ್ಲಿ ತಿಳಿಸಿದ್ದಾರೆ.
ರೈತರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿದ್ಯುತ್ ಪೂರೈಕೆ ಮಾಡುವಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಮನವಿ ಮಾಡಿದರು. ಕಾಂಗ್ರೆಸ್ ಪಕ್ಷದ ಯುವ ಮುಖಂಡ ಅಶೋಕ್ ಬೇಳೂರು ನೇತೃತ್ವದ ನಿಯೋಗ ಹುಬ್ಬಳ್ಳಿಯಲ್ಲಿ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿಯಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಮನವಿ ಪತ್ರ ಹಸ್ತಾಂತರ ಮಾಡಿದರು.

ಪ್ರಮುಖರಾದ ವಾಸು, ಚಂದ್ರಶೇಖರ್, ವೀರಪ್ಪ, ವೆಂಕಟೇಶ್, ಮಂಜುನಾಥ್, ದೇವೇಂದ್ರ, ಲಿಂಗರಾಜ್ ಉಪಸ್ಥಿತರಿದ್ದರು.

ಇದನ್ನೂ ಓದಿ » ಗೋಧಿಗಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡ ಶಿವಮೊಗ್ಗದ ಉದ್ಯಮಿ, ಆಗಿದ್ದೇನು?
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು















