ಶಿವಮೊಗ್ಗ ಲೈವ್.ಕಾಂ | 07 ಜನವರಿ 2019
ಮಂಗನಕಾಯಿಲೆಯಿಂದ ಆತಂಕಕ್ಕೀಡಾಗಿರುವ ಸಾಗರದ ಅರಳಗೋಡು ಗ್ರಾಮಕ್ಕೆ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಇದೇ ವೇಳೆ, ಆರೋಗ್ಯ ಇಲಾಖೆಯ ನಿರ್ಲಕ್ಷದ ಕುರಿತು ತನಿಖೆ ನಡೆಸುವುದಾಗಿಯೂ ಭರವಸೆ ನೀಡಿದ್ದಾರೆ.
ಎಲ್ಲೆಲ್ಲಿಗೆ ಭೇಟಿ ಕೊಟ್ಟರು ಮಿನಿಸ್ಟರ್?
ಸಚಿವ ಶಿವಾನಂದ ಪಾಟೀಲ್ ಅವರು, ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಮಂಗನಕಾಯಿಲೆಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾದವರ ಆರೋಗ್ಯ ವಿಚಾರಿಸಿದರು. ಬಳಿಕ, ಭಾರಂಗಿ ಹೋಬಳಿಯ ಅರಳಗೋಡು ಗ್ರಾಮಕ್ಕೆ ಭೇಟಿ ನೀಡಿದರು. ಗ್ರಾಮಸ್ಥರೊಂದಿಗೆ ಚರ್ಚಿಸಿದರು.
ಪರಿಹಾರ, ಇಲಾಖೆ ವಿರುದ್ಧ ತನಿಖೆ
ಮಂಗನಕಾಯಿಲೆ ಬಗ್ಗೆ ಆರೋಗ್ಯ ಇಲಾಖೆ ನಿರ್ಲಕ್ಷ ವಹಿಸಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಮತ್ತು ನಿಗಾವಹಿಸದಿರುವ ಕುರಿತು ಉನ್ನತ ಮಟ್ಟದ ಸಮಿತಿಯಿಂದ ತನಿಖೆ ನಡೆಸಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದರು. ಇನ್ನು, ಮಂಗನಕಾಯಿಲೆಗೆ ತುತ್ತಾಗಿ ಮೃತಪಟ್ಟವರ ಕುಟುಂಬಕ್ಕೆ ವೈಯಕ್ತಿಕವಾಗಿ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ಸಚಿವರು ಭರವಸೆ ನೀಡಿದರು.
ಶಾಸಕ ಹರತಾಳು ಹಾಲಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಆರೋಗ್ಯ ಇಲಾಖೆ ನಿರ್ದೇಶಕ ಡಾ.ಪ್ರಭಾಕರ್, ಡಾ.ಮಲ್ಲೇಶಪ್ಪ, ಡಿಹೆಚ್ಓ ಡಾ.ವೆಂಕಟೇಶ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]