ಸಾಗರ: ನಮ್ಮ ದೇಶದಲ್ಲಿ ಇದ್ದುಕೊಂಡು ಪಾಕಿಸ್ತಾನ ಜಿಂದಾಬಾದ್ (Pakistan) ಎನ್ನುವವರು ದೇಶದ್ರೋಹಿಗಳು. ಅವರು ಈ ದೇಶದಲ್ಲಿ ಇರುವಂತಿಲ್ಲ. ಅಂತಹವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸಾಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ಖಂಡನೀಯ. ಅಂತಹ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮವಾಗಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ ಎಂದರು.
ಎಲ್ಲ ಧರ್ಮದಲ್ಲಿಯು ಕಿಡಿಗೇಡಿಗಳಿರುತ್ತಾರೆ. ಅಂತಹವರನ್ನು ಗುರುತಿಸಿ ಸಮಾಜ ಬಾಂಧವರು ದೂರ ಇರಿಸಬೇಕು. ಇಲ್ಲವಾದಲ್ಲಿ ಒಬ್ಬಿಬ್ಬರು ಮಾಡುವ ಕಿಡಿಗೇಡಿ ಕೃತ್ಯ ಇಡೀ ಸಮಾಜಕ್ಕೆ ಕೆಟ್ಟ ಹೆಸರು ತರಲಿದೆ. ಸಾಗರದಲ್ಲಿ ಇಬ್ಬರು ಮಕ್ಕಳು ಉಗುಳಿರುವ ಪ್ರಕರಣ ಸಂಬಂಧ ಅವರ ತಾಯಿ ಕ್ಷಮಾಪಣೆ ಕೇಳಿದ್ದಾರೆ. ಈ ಕೃತ್ಯದ ಹಿಂದೆ ಯಾರಾದರು ಇದ್ದಾರೆಯೆ ಎಂದು ತನಿಖೆ ನಡೆಸುವಂತೆ ಡಿವೈಎಸ್‌ಪಿ ಅವರಿಗೆ ತಿಳಿಸಲಾಗಿದೆ ಎಂದರು.


ಇದನ್ನೂ ಓದಿ » ಭದ್ರಾ ಜಲಾಶಯಕ್ಕೆ ಡಿ.ಕೆ.ಶಿವಕುಮಾರ್ ಬಾಗಿನ, ಪ್ರವಾಸಿ ಮಂದಿರ ಉದ್ಘಾಟನೆ, ಡಿಸಿಎಂ ಏನೆಲ್ಲ ಹೇಳಿದರು?

Beluru gopalakrishna angry against pro Pakistan slogan
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





