SHIMOGA NEWS, 27 NOVEMBER 2024
ಸಾಗರ : ಇಲ್ಲಿನ ಅಗ್ರಹಾರ ವೃತ್ತದಿಂದ ರಾಮನಗರದವರೆಗೆ ನಿರ್ಮಾಣವಾಗುತ್ತಿರುವ ರಾಜ್ಯ ಹೆದ್ದಾರಿ (Highway) ಕಾಮಗಾರಿಯನ್ನು ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮತ್ತು ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ ನಡೆಸಿದರು. ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
![]() |
ಅಗ್ರಹಾರ ವೃತ್ತದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಜೊತೆ ತೆರಳಿ ಕಾಮಗಾರಿ ಪರಿಶೀಲಿಸಿದರು.
11 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ
ಅಗ್ರಹಾರ ವೃತ್ತದಿಂದ ರಾಮನಗರದವರೆಗೆ, ಕೆಳದಿ ಚೆನ್ನಮ್ಮ ವೃತ್ತದಿಂದ ಶ್ರೀಗಂಧ ಸಂಕೀರ್ಣದವರೆಗೆ ರಾಜ್ಯ ಹೆದ್ದಾರಿ ಅಭಿವೃದ್ಧಿಪಡಿಸಲಾಗುತ್ತಿದೆ. ಎರಡು ರಸ್ತೆಗಳು 46 ಅಡಿ ಅಗಲವಿರಲಿದೆ. ನಡುವೆ ಡಿವೈಡರ್ ಇರಲಿದೆ. ಎರಡು ರಸ್ತೆಗೆ ತಲಾ 5.50 ಕೋಟಿ ರೂ. ಬಿಡುಗಡೆಯಾಗಿದೆ. ಬೈಪಾಸ್ ರಸ್ತೆ ಅಭಿವೃದ್ಧಿಗೆ 3 ಕೋಟಿ ರೂ. ಬಿಡುಗಡೆಯಾಗಲಿದೆ.
ಬೇಳೂರು ಗೋಪಾಲಕೃಷ್ಣ, ಶಾಸಕ
ಮಾರ್ಕೆಟ್ ರಸ್ತೆ ಅಗಲೀಕರಣಕ್ಕೆ ಇನ್ನು ಹದಿನೈದು ದಿನದಲ್ಲಿ ನೀಲನಕ್ಷೆ ಸಿದ್ಧಪಡಿಸಿ, ಭೂ ಸ್ವಾಧೀನ ಕಾರ್ಯ ಆರಂಭಸಲಾಗುತ್ತದೆ. ಬಿ.ಹೆಚ್.ರಸ್ತೆ ಅಗಲೀಕರಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗುತ್ತದೆ ಎಂದು ಬೇಳೂರು ಗೋಪಾಲಕೃಷ್ಣ ತಿಳಿಸಿದರು.
ಇದನ್ನೂ ಓದಿ » ಪೊಲೀಸರ ಕಂಡು ಎಸ್ಕೇಪ್ ಆಗಲು ಯತ್ನಿಸಿದ ಯುವಕರು, ಹಿಡಿದು ವಿಚಾರಿಸಿದಾಗ ಹೊರಬಿತ್ತು ಶಾಕಿಂಗ್ ವಿಷಯ
Highway Road Project
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200