ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ: ನಗರದ ಕೆಳದಿ ರಸ್ತೆಯ ರೈಲ್ವೆ ಗೇಟ್ ಬಳಿ ಕೆಳ ಸೇತುವೆ ನಿರ್ಮಿಸುವ ಬದಲು ಮೇಲ್ಸೇತುವೆ (railway overbridge) ನಿರ್ಮಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Shivamogga-Live-Number-1-Website

ಕೆಳದಿ ರಸ್ತೆಯ ರೈಲ್ವೆ ಗೇಟ್ ಬಳಿ ಕೆಳ ಸೇತುವೆ ನಿರ್ಮಾಣ ಸಂಬಂಧ ಸ್ಥಳ ಪರಿಶೀಲನೆಗೆ ರೈಲ್ವೆ ಇಲಾಖೆ ಅಧಿಕಾರಿಗಳು ಆಗಮಿಸಿದ್ದ ವೇಳೆ ಅವರೊಂದಿಗೆ ಸಮಾಲೋಚನೆ ನಡೆಸಿದ ಅವರು, ಕೆಳ ಸೇತುವೆ ನಿರ್ಮಿಸಿದರೆ ಆಗುವ ಅನಾನೂಕೂಲಗಳ ಕುರಿತು ತಿಳಿಸಿದರು.

ಕೆಳದಿ ರಸ್ತೆಯ ರೈಲ್ವೆ ಗೇಟ್ ಸಮೀಪ ವರದಾ ನದಿ ಹರಿಯುತ್ತಿದ್ದು ವರದಾ ಸೇತುವೆ ಇದೆ. ಅಲ್ಲಿ ಕೆಳಸೇತುವೆ ನಿರ್ಮಿಸುವುದರಿಂದ ಮಳೆಗಾಲದಲ್ಲಿ ನೀರು ಕೆಳ ಸೇತುವೆಯಲ್ಲಿ ನಿಂತು ಸಮಸ್ಯೆ ಉಂಟಾಗುತ್ತದೆ. ಈಗಾಗಲೇ ತಾಲೂಕಿನ ಅಡ್ಡೇರಿ ಗ್ರಾಮದಲ್ಲಿ ನಿರ್ಮಿಸಿರುವ ಕೆಳ ಸೇತುವೆಯಲ್ಲಿ ಈ ಸಮಸ್ಯೆ ಉಂಟಾಗಿದೆ ಎಂದು ಅಧಿಕಾರಿಗಳಿಗೆ ತಿಳಿಸಿದರು.

Beluru-Gopalakrishna-in-a-press-meet

ಸಾಗರದಿಂದ ಸೊರಬಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗದಲ್ಲಿ ರೈಲ್ವೆ ಗೇಟ್ ಬರುತ್ತಿದ್ದು, ಇಲ್ಲಿ ಹೆಚ್ಚಿನ ಜನ ಹಾಗೂ ವಾಹನಗಳ ಸಂಚಾರವಿದೆ. ಹೀಗಾಗಿ ಇಲ್ಲಿ ಸುಸಜ್ಜಿತವಾದ ಮೇಲ್ಸೇತುವೆ ನಿರ್ಮಿಸುವುದು ಸೂಕ್ತ. ಈ ಸಂಬಂಧ ಕೇಂದ್ರ ಸಚಿವ ವಿ. ಸೋಮಣ್ಣ, ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ : ‘ನಾನೂ ಸಚಿವ ಸ್ಥಾನದ ಅಕಾಂಕ್ಷಿ’, ಮಿನಿಸ್ಟರ್‌ ಪದವಿ ಬಗ್ಗೆ ಬೇಳೂರು ಏನೆಲ್ಲ ಹೇಳಿದರು?

ಪ್ರಮುಖರಾದ ಐ.ಎನ್. ಸುರೇಶ್ ಬಾಬು, ಗಣಪತಿ ಮಂಡಗಳಲೆ, ಮಂಜುನಾಥ್, ಡಿ.ದಿನೇಶ್, ಲೋಕೋಪಯೋಗಿ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 9, 2026

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವು, ತೋಟದ ಬಳಿ ಪತ್ತೆಯಾಯ್ತು ಮೃತದೇಹ

ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವು, ತೋಟದ ಬಳಿ ಪತ್ತೆಯಾಯ್ತು ಮೃತದೇಹ

ಶಿವಮೊಗ್ಗದ ಈ ಬಡಾವಣೆ ಇನ್ಮುಂದೆ ಎಸ್.‌ ಬಂಗಾರಪ್ಪ ಬಡಾವಣೆ

ಶಿವಮೊಗ್ಗದ ಈ ಬಡಾವಣೆ ಇನ್ಮುಂದೆ ಎಸ್.‌ ಬಂಗಾರಪ್ಪ ಬಡಾವಣೆ

ಭೂಮಾಪಕನಿಗೆ ಕಾರು ಡಿಕ್ಕಿ, ಆಸ್ಪತ್ರೆಗೆ ದಾಖಲು, ಶಸ್ತ್ರಚಿಕಿತ್ಸೆ, ಎಲ್ಲಿ? ಹೇಗಾಯ್ತು ಘಟನೆ?

ಭೂಮಾಪಕನಿಗೆ ಕಾರು ಡಿಕ್ಕಿ, ಆಸ್ಪತ್ರೆಗೆ ದಾಖಲು, ಶಸ್ತ್ರಚಿಕಿತ್ಸೆ, ಎಲ್ಲಿ? ಹೇಗಾಯ್ತು ಘಟನೆ?

ಶಿವಮೊಗ್ಗದ ಇಬ್ಬರಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪುರಸ್ಕಾರ

ಶಿವಮೊಗ್ಗದ ಇಬ್ಬರಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪುರಸ್ಕಾರ

ಇಂಟರ್‌ಸಿಟಿ ರೈಲಿನಲ್ಲಿ ಶಿವಮೊಗ್ಗಕ್ಕೆ ಬಂದ ಮಹಿಳೆ, ಮನೆ ತಲುಪಿದ ಮೇಲೆ ಕಾದಿತ್ತು ಆಘಾತ

ಇಂಟರ್‌ಸಿಟಿ ರೈಲಿನಲ್ಲಿ ಶಿವಮೊಗ್ಗಕ್ಕೆ ಬಂದ ಮಹಿಳೆ, ಮನೆ ತಲುಪಿದ ಮೇಲೆ ಕಾದಿತ್ತು ಆಘಾತ

Leave a Comment