ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA | 21 ಅಕ್ಟೋಬರ್ 2019
ಸಾಗರ ಉಪವಿಭಾಗಾಧಿಕಾರಿ ಕಚೇರಿ ಮುಂದೆ ಶಾಸಕ ಹರತಾಳು ನೇತೃತ್ವದಲ್ಲಿ ರೈತರು ದಿಢೀರ್ ಪ್ರತಿಬಟನೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿ ಅವರು ಸ್ಥಳಕ್ಕೆ ಆಗಮಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ತಾಲೂಕಿನ ಇರುವಕ್ಕಿಯಲ್ಲಿ ಕೃಷಿ ವಿಶ್ವವಿದ್ಯಾನಿಲಯ ನಿರ್ಮಿಸಲಾಗುತ್ತಿದೆ. ವಿವಿ ಆವರಣದ ಪಕ್ಕದಲ್ಲಿರುವ ಜಮೀನುಗಳಿಗೆ ಜಮೀನುಗಳಿಗೆ ಇತ್ತೀಚೆಗೆ ಕಳೆನಾಶಕ ಸಿಂಪಡಿಸಲಾಗಿದೆ. ವಿವಿ ಸಿಬ್ಬಂದಿಯೆ ಇದನ್ನು ಸಿಂಪಡಿಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ರೈತರನ್ನು ಒಕ್ಕಲೆಬ್ಬಿಸಬೇಕು ಎಂಬ ದುರುದ್ದೇಶದಿಂದಲೇ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಗರ ಉಪವಿಭಾಗಾಧಿಕಾರಿ ಕಚೇರಿ ಮುಂದೆ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಶಾಸಕ ಹರತಾಳು ಹಾಲಪ್ಪ ಬೆಂಬಲ ನೀಡಿದ್ದಾರೆ. ಎಸಿ ಕಚೇರಿ ಮುಂದೆ ರೈತರೊಂದಿಗೆ ಧರಣಿ ನಡೆಸುತ್ತಿದ್ದಾರೆ.
ಜಿಲ್ಲಾಧಿಕಾರಿ ಅವರು ಸ್ಥಳಕ್ಕೆ ಆಗಮಿಸಿ ರೈತರಿಗೆ ನ್ಯಾಯ ಕೊಡಿಸಬೇಕು. ಅಲ್ಲಿಯವರೆಗೆ ಉಪವಿಭಾಗಾಧಿಕಾರಿ ಕಚೇರಿ ಮುಂದೆ ಧರಣಿ ಮುಂದುವರೆಸುವುದಾಗಿ ಶಾಸಕರು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422