SHIVAMOGGA LIVE NEWS | SAGARA | 4 ಜೂನ್ 2022
ಶಾಸಕ ಹರತಾಳು ಹಾಲಪ್ಪ ಅವರು ಇವತ್ತು ಸಾಗರ ನಗರಸಭೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಅಧಿಕಾರಿಗಳ ಕರ್ತವ್ಯ ಲೋಪ ಕಂಡು ಆಕ್ರೋಶ ವ್ಯಕ್ತಪಡಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಇವತ್ತು ಬೆಳಗ್ಗೆ ಶಾಸಕ ಹರತಾಳು ಹಾಲಪ್ಪ ಅವರು ಸಾಗರ ನಗರಸಭೆಗೆ ದಿಢೀರ್ ಭೇಟಿ ನೀಡಿದ್ದರು. ಜನರ ಕೆಲಸ ಮಾಡಿಕೊಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕಾಣೆಯಾದ ಕಡತ ದಿಢೀರ್ ಪ್ರತ್ಯಕ್ಷ
ನಾಗರಾಜ್ ಎಂಬುವವರು ನಗರಸಭೆ ಅಧಿಕಾರಿಗಳು ತಮ್ಮನ್ನು ಸತಾಯಿಸುತ್ತಿರುವ ಕುರಿತು ಅಳಲು ತೋಡಿಕೊಂಡರು. ಖಾತೆ ಬದಲಾವಣೆ ಸಂಬಂಧದ ಕಡತವನ್ನು ನಾಗರಾಜ್ ಅವರು ನಗರಸಭೆ ಕಂದಾಯ ವಿಭಾಗದ ಅಧಿಕಾರಿಯೊಬ್ಬರಿಗೆ ನೀಡಿದ್ದರು. ಆ ಬಳಿಕ ಹಲವು ಭಾರಿ ಬಂದರೂ ಕಡತ ಕಾಣೆಯಾಗಿದೆ ಎಂದು ಅಧಿಕಾರಿಗಳು ಸಬೂಬು ಹೇಳುತ್ತಿದ್ದರು. ಶಾಸಕರ ಬಳಿ ನಾಗರಾಜ್ ಅವರು ಈ ವಿಚಾರ ತಿಳಿಸುತ್ತಿದ್ದಂತೆ ಅಧಿಕಾರಿ ಕಡತ ತಂದು ಕೊಟ್ಟರು.
ಹೆಚ್ಚುವರಿ ಸ್ಕ್ಯಾನರ್ ಖರೀದಿಗೆ ಸೂಚನೆ
ಇನ್ನು, ನಗರಸಭೆಯಲ್ಲಿ ಈ – ಸ್ವತ್ತು ನೀಡುವಲ್ಲಿ ವಿಳಂಬವಾಗುತ್ತಿರುವ ಕುರಿತು ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದರು. ಪೌರಾಯುಕ್ತರಿಂದ ಮಾಹಿತಿ ಪಡೆದ ಶಾಸಕ ಹರತಾಳು ಹಾಲಪ್ಪ ಅವರು, ಅಗತ್ಯವಿದ್ದರೆ ಹೆಚ್ಚುವರಿ ಸ್ಕ್ಯಾನರ್ ಖರೀದಿಗೆ ಸೂಚನೆ ನೀಡಿದರು.
ಗುತ್ತಿಗೆದಾರರಿಗೆ ನೊಟೀಸ್ ನೀಡಲು ಸೂಚನೆ
ಮತ್ತೊಂದೆಡೆ ನಗರ ಸಭೆ ವ್ಯಾಪ್ತಿಯಲ್ಲಿ 8 ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದೆ. ಆದರೆ ಕಾಮಗಾರಿ ವಿಳಂಬ ಮಾಡಲಾಗುತ್ತಿದೆ. ಈ ಕುರಿತ ಶಾಸಕ ಹಾಲಪ್ಪ ಅವರು ಪರಿಶೀಲನೆ ನಡೆಸಿದರು. ಕಾಮಗಾರಿ ವಿಳಂಬಕ್ಕೆ ಕಾರಣವಾದ ಇಂಜಿನಿಯರ್ ಮತ್ತು ಗುತ್ತಿಗೆದಾರರ ವಿರುದ್ಧ ನೊಟೀಸ್ ಜಾರಿ ಮಾಡುವಂತೆ ಸೂಚನೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಹರತಾಳು ಹಾಲಪ್ಪ ಅವರು, ನಗರಸಭೆಯಲ್ಲಿ ಕೆಲಸಗಳು ವಿಳಂಬವಾಗುತ್ತಿರುವ ಕುರಿತು ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದಾಗ ಹಲವು ಲೋಪ ಕಂಡು ಬಂದಿದೆ. ಸಮರ್ಪಕ ಸೇವೆ ಒದಗಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟು ಸೂಚನೆ ನೀಡಲಾಗಿದೆ. ಇನ್ನು, ಸಾರ್ವಜನಿಕರು ಮಧ್ಯವರ್ತಿಗಳನ್ನು ಅವಲಂಬಿಸದೆ ನೇರವಾಗಿ ಅಧಿಕಾರಿಗಳಿಂದ ಕೆಲಸ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.
ನಗರ ಸಭೆ ಅಧ್ಯಕ್ಷೆ ಮಧುರಾ ಶಿವಾನಂದ, ಉಪಾಧ್ಯಕ್ಷ ವಿ.ಮಹೇಶ್, ಪೌರಾಯುಕ್ತ ರಾಜು ಡಿ.ಬಣಕಾರ್ ಸೇರಿದಂತೆ ಹಲವರು ಈ ವೇಳೆ ಇದ್ದರು.
ಇದನ್ನೂ ಓದಿ – ಕೆಲಸದಲ್ಲಿ ವಿಳಂಬ, ನಿರ್ಲಕ್ಷ್ಯ, ಅಧಿಕಾರಿಗಳ ವಿರುದ್ಧ ದೂರು ನೀಡಲು ಲೋಕಾಯುಕ್ತದಿಂದ ಕುಂದು ಕೊರತೆ ಸಭೆ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.