ಶಿವಮೊಗ್ಗ ಲೈವ್.ಕಾಂ | SAGARA NEWS | 25 FEBRUARY 2021
ಸಾಗರದ ಇಂದಿರಾ ಗಾಂಧಿ ಕಾಲೇಜನ್ನು ವಿಜಯಾಪುರದ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ತರುವ ಸರ್ಕಾರದ ನಿರ್ಧಾರಕ್ಕೆ ಶಾಸಕ ಹರತಾಳು ಹಾಲಪ್ಪ ವಿರೋಧ ವ್ಯಕ್ತಪಡಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇಂದಿರಾ ಗಾಂಧಿ ಕಾಲೇಜಿನಲ್ಲಿ ಇವತ್ತು ನಡೆದ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದ ಶಾಸಕ ಹರತಾಳು ಹಾಲಪ್ಪ, ಅಕ್ಕಮಹಾದೇವಿ ವಿವಿಯೊಂದಿಗೆ ಈ ಕಾಲೇಜನ್ನು ಸಂಯೋಜನೆಗೊಳ್ಳಲು ಅವಕಾಶ ನೀಡುವುದಿಲ್ಲ ಎಂದರು.
ಸಣ್ಣಪುಟ್ಟದಕ್ಕೂ 400 ಕಿಮೀ ಹೋಗಬೇಕು
ಅಕ್ಕಮಹಾದೇವಿ ವಿವಿಯೊಂದಿಗೆ ಸಂಯೋಜನೆಗೊಂಡರೆ ಇಲ್ಲಿಯ ವಿದ್ಯಾರ್ಥಿಗಳು ಸಣ್ಣಪುಟ್ಟದಕ್ಕೂ 400 ಕಿ.ಮೀ ಹೋಗಿ ಬರಬೇಕು. ಅದರ ಬದಲು ಕುವೆಂಪು ವಿಶ್ವವಿದ್ಯಾಲಯ 100 ಕಿ.ಮೀ ವ್ಯಾಪ್ತಿಯಲ್ಲೇ ಇದೆ. ಹಾಗಾಗಿ ಅಕ್ಕಮಹಾದೇವಿ ವಿವಿಗೆ ಇಂದಿರಾ ಗಾಂಧಿ ಕಾಲೇಜು ಸಂಯೋಜನೆಗೊಳ್ಳುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಹರತಾಳು ಹಾಲಪ್ಪ ತಿಳಿಸಿದರು.
ಕಾಲೇಜು ಅಭಿವೃದ್ಧಿಗೆ ಐದು ಕೋಟಿ
ಕಾಲೇಜಿನ ಗ್ರಂಥಾಲಯ, ಸೆಮಿನಾರ್ ಹಾಲ್, ಹೆಚ್ಚುವರಿ ಕ್ಲಾಸ್ ರೂಂಗಳ ನಿರ್ಮಾಣಕ್ಕೆ 5.20 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಸಂಸದ ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ ಸದ್ಯದಲ್ಲೇ ಈ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ. ಕಾಲೇಜು ಕುರಿತು ಉಪ ಮುಖ್ಯಮಂತ್ರಿ ಡಾ.ಅಶ್ವಥ ನಾರಾಯಣ ಅವರೊಂದಿಗೆ ಚರ್ಚಿಸಿದ್ದೇನೆ. ಕಂಪ್ಯೂಟರ್ ಲ್ಯಾಬ್ ಸೇರಿದಂತೆ ಇತರೆ ವ್ಯವಸ್ಥೆಗಳಿಗಾಗಿ 45 ಲಕ್ಷ ರೂ. ಅನುದಾನ ನೀಡುವ ಭರವಸೆ ನೀಡಿದ್ದಾರೆ ಎಂದರು.
ಕಾಲೇಜು ಪ್ರಾಂಶುಪಾಲ ಡಾ. ಅಶೋಕ್ ಡಿ.ರೇವಣಕರ್, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ, ಉಪಾಧ್ಯಕ್ಷ ವಿ.ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಡಿ.ತುಕಾರಾಮ್, ಕಾಲೇಜು ಅಭಿವೃದ್ದಿ ಉಪಾಧ್ಯಕ್ಷ ಟಿ.ಡಿ.ಮೇಘರಾಜ್, ಸದಸ್ಯರಾದ ಯು.ಹೆಚ್.ರಾಮಪ್ಪ, ಬಿ.ಹೆಚ್.ಲಿಂಗರಾಜು, ರಾಜೇಂದ್ರ ಪೈ, ಪ್ರಾಧ್ಯಾಪಕರಾದ ಡಾ.ಗಣೇಶ್ ಭಟ್, ಡಾ.ಓ.ಜಿ.ಬಸವನಗೌಡ, ಪ್ರೊ. ಮಹಾಬಲೇಶ್ವರ್ ಸೇರಿದಂತೆ ಹಲವರು ಸಭೆಯಲ್ಲಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]