ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 6 JANUARY 2025
ಸಾಗರ : ಪ್ರವಾಸಿ ಮಂದಿರದಲ್ಲಿ ಅರಣ್ಯಾಧಿಕಾರಿಗಳ ಜೊತೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸಭೆ ನಡೆಸಿದರು. ಆನೆಗಳ (Elephants) ದಾಳಿ, ಬೆಳೆ ಹಾನಿ ಕುರಿತು ಚರ್ಚೆ ನಡೆಸಿದರು.
ಸಮಾಲೋಚನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಬೇರೆ ಪ್ರದೇಶಗಳಿಂದ ಸಾಗರ ತಾಲೂಕಿಗೆ ಆನೆಗಳು ಲಗ್ಗೆ ಇಡುತ್ತಿವೆ. ಇವುಗಳ ನಿಯಂತ್ರಣದ ವಿಷಯವನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಲು ಸೂಚಿಸಿದ್ದೇನೆ ಎಂದರು.
ತಾಲ್ಲೂಕಿನ ಗೌತಮಪುರ, ಆನಂದಪುರಂ, ಗಿಳಲಗುಂಡಿ ಹಾಗೂ ಸುತ್ತಮುತ್ತಲ ಪ್ರದೇಶ ಗಳಲ್ಲಿ ಆನೆ ಹಾವಳಿಯಿಂದ ಬೆಳೆಗಳಿಗೆ ಹಾನಿ ಉಂಟಾಗಿದೆ. ಆನೆಗಳ ಹಾವಳಿ ತಡೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
ಗೋಪಾಲಕೃಷ್ಣ ಬೇಳೂರು, ಶಾಸಕ
ತಾಲೂಕಿನ ಕಾರ್ಗಲ್ ಸಮೀಪದ ಗ್ರಾಮವೊಂದರಲ್ಲಿ ಒತ್ತುವರಿ ತೆರವು ನೆಪದಲ್ಲಿ ಬೆಳೆದು ನಿಂತ ಮರಗಳ ಕಡಿತಲೆ ಮಾಡಿರುವ ಅರಣ್ಯ ಇಲಾಖೆಯ ಕ್ರಮ ಸರಿಯಲ್ಲ. ಈಗಾಗಲೆ ಬೇರೆ ಬೇರೆ ಪ್ರಕರಣಗಳಲ್ಲಿ ಈ ರೀತಿ ಬೆಳೆದು ನಿಂತ ಮರಗಳನ್ನು ಕಡಿಯಬಾರದು ಎಂದು ರಾಜ್ಯದ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಆದಾಗ್ಯೂ ಮರ ಕಡಿತಲೆ ಮಾಡಿರುವ ಅಧಿಕಾರಿಗಳ ಕ್ರಮ ಖಂಡನೀಯ ಎಂದರು.ಮರ ಕಡಿತಲೆ ಖಂಡನೀಯ
ಡಿಎಫ್‌ಓ ಮೋಹನ್ ಕುಮಾರ್ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಸಭೆಯಲ್ಲಿದ್ದರು.
ಇದನ್ನೂ ಓದಿ » ಆನಂದಪುರ ಬಳಿ ಕಾಡಾನೆಗಳು ಪ್ರತ್ಯಕ್ಷ, ತೋಟ, ಗದ್ದೆಯಲ್ಲಿ ಸಂಚಾರ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422