ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಸಾಗರ: ಪಟ್ಟಣಕ್ಕೆ ನೂತನ ಟ್ರಾಫಿಕ್ ಪೊಲೀಸ್ ಠಾಣೆ (Police Station) ಮತ್ತು ತುಮರಿ – ಬ್ಯಾಕೋಡು ಭಾಗಕ್ಕೆ ನೂತನ ಪೊಲೀಸ್ ಠಾಣೆ ಮಂಜೂರು ಮಾಡುವಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಸಾಗರ ಪಟ್ಟಣ ಬೆಳೆಯುತ್ತಿದ್ದು ವರ್ಷದಿಂದ ವರ್ಷಕ್ಕೆ ವಾಹನಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಇನ್ನು, ಅನೇಕ ಪ್ರವಾಸಿ ತಾಣಗಳಿದ್ದು ಪ್ರವಾಸಿ ವಾಹನಗಳ ದಟ್ಟಣೆಯು ಹೆಚ್ಚಿರುತ್ತದೆ. ಸಿಗಂದೂರಿಗೆ ನಿತ್ಯ ಸಾವಿರಾರು ಭಕ್ತರು ಭೇಟಿ ನೀಡುತ್ತಿದ್ದಾರೆ. ನಗರದಲ್ಲಿ ವಾಹನ ದಟ್ಟಣೆ ನಿಯಂತ್ರಣ ಮತ್ತು ಸುಗಮ ಸಂಚಾರಕ್ಕೆ ಪ್ರತ್ಯೇಕ ಸಂಚಾರ ಠಾಣೆ ಅವಶ್ಯವಿದೆ ಎಂದು ಬೇಳೂರು ಗೋಪಾಲಕೃಷ್ಣ ಮನವಿಯಲ್ಲಿ ತಿಳಿಸಿದ್ದಾರೆ.
ಇನ್ನು, ಸಿಗಂದೂರು ಭಾಗಕ್ಕೆ ಹೆಚ್ಚಿನ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಕ್ಷೇತ್ರದ ಸಮೀಪವಿರುವ ಬ್ಯಾಕೋಡು – ತುಮರಿ ಪ್ರದೇಶಕ್ಕೆ ನೂತನ ಪೊಲೀಸ್ ಠಾಣೆ ಮಂಜೂರು ಮಾಡುವಂತೆಯು ಮನವಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಲೈವ್.ಕಾಂ ವರದಿ ಪರಿಣಾಮ, ಕೋಟಿ ವೆಚ್ಚದಲ್ಲಿ ರಿಪೇರಿಯಾಗ್ತಿದೆ ರೋಡ್, ಸ್ಥಳಕ್ಕೆ ಎಂಎಲ್‌ಎ ಭೇಟಿ
Police Station






