ಸಾಗರ : ಆಕಸ್ಮಿಕ ಬೆಂಕಿಗೆ ಮನೆಯೊಂದು (house) ಸಂಪೂರ್ಣ ಸುಟ್ಟು ಹೋಗಿದೆ. ಅದೃಷ್ಟವಶಾತ್ ಕುಟುಂಬದವರು ಪಾರಾಗಿದ್ದು, ಗೃಹೋಪಯೋಗಿ ವಸ್ತುಗಳು ಆಹುತಿಯಾಗಿವೆ. ವಿಷಯ ತಿಳಿದು ಶಾಸಕ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೆ ಕುಟುಂಬಕ್ಕೆ ವೈಯಕ್ತಿಕವಾಗಿ ನೆರವಾದರು.
ಸಾಗರ ತಾಲೂಕು ಆನಂದಪುರ ಸಮೀಪದ ಗೌತಮಪುರದ ಸರಸ್ವತಿ ಮಂಜಪ್ಪ ಎಂಬುವವರ ಮನೆಯಲ್ಲಿ ಸೋಮವಾರ ಬೆಳಗಿನ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದವರು ಕೂಡಲೆ ಹೊರ ಬಂದಿದ್ದು ಅದೃಷ್ಟವಶಾತ್ ಪಾರಾಗಿದ್ದಾರೆ. ಮನೆಯಲ್ಲಿದ್ದ ವಸ್ತುಗಳು, ಜೀವನ ನಿರ್ವಹಣೆಗೆ ಇದ್ದ ಟೈಲರಿಂಗ್ ಮೆಷಿನ್ ಆಹುತಿಯಾಗಿವೆ.
ಸ್ಥಳಕ್ಕೆ ಎಂಎಲ್ಎ ಭೇಟಿ, ನೆರವು
ಇನ್ನು, ವಿಷಯ ತಿಳಿದು ಶಾಸಕ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿದರು. ಮನೆ ಪರಿಶೀಲಿಸಿದರು. ಬಳಿಕ ಕುಟುಂಬಕ್ಕೆ ವೈಯಕ್ತಿಕವಾಗಿ ಧನ ಸಹಾಯ ಮಾಡಿದರು. ಗ್ರಾಮ ಪಂಚಾಯಿತಿ ಸದಸ್ಯರು ನೆರವು ನೀಡುವಂತೆ ಸೂಚಿಸಿದರು. ಅಲ್ಲದೆ, ಕುಟುಂಬಕ್ಕೆ ಕೂಡಲೆ ಹೊಸ ಮನೆ ಕಟ್ಟಿಸಿಕೊಡುವಂತೆ ತಿಳಿಸಿದರು.
ಕಳಸೆ ಚಂದ್ರಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗಮ್ಮ ನಾಗಪ್ಪ, ಮಂಜುನಾಥ್ ದಾಸನ್, ಅಶೋಕ್, ಶೇಖರಪ್ಪ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.
ಇದನ್ನೂ ಓದಿ » ಹಂದಿಗಾಗಿ ಕೈ ಕೈ ಮಿಲಾಯಿಸಿ ಆಸ್ಪತ್ರೆ ಸೇರಿದ ಯುವಕರು, ದೂರು, ಪ್ರತಿದೂರು ದಾಖಲು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200