ಸಾಗರ : ವರದಾ ರಸ್ತೆಯಲ್ಲಿರುವ ಉಪ ಕಾರಾಗೃಹ ಕಟ್ಟಡದ (Jail Building) ರಿಪೇರಿ ಕಾಮಗಾರಿ ತ್ವರಿತಗತಿಯಲ್ಲಿ ಸಾಗಿದೆ. ಶೀಘ್ರವೇ ನವೀಕೃತ ಕಟ್ಟಡದ ಉದ್ಘಾಟನೆ ನಡೆಯಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.
ಉಪ ಕಾರಾಗೃಹ ಕಟ್ಟಡದ ದುರಸ್ತಿ ಕಾಮಗಾರಿಯನ್ನು ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣವಾಗಿದ್ದ ಉಪ ಕಾರಾಗೃಹ ಕಟ್ಟಡ ಶಿಥಿಲಗೊಂಡಿದ್ದ ಕಾರಣ ನವೀಕೃತ ಕಟ್ಟಡ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.
![]() |
ಕಟ್ಟಡದ ನವೀಕರಣಕ್ಕೆ 1.16 ಕೋಟಿ ರೂ. ಮಂಜೂರಾಗಿದೆ. ಕಾರಾಗೃಹದ ವಾರ್ಡನ್ ಹಾಗೂ ಸಿಬ್ಬಂದಿ ವರ್ಗದವರಿಗೆ ವಸತಿ ಗೃಹ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಕಾರಾಗೃಹದ ಆವರಣದಲ್ಲಿ ಉದ್ಯಾನ ನಿರ್ಮಿಸಲಾಗುವುದು.
– ಬೇಳೂರು ಗೋಪಾಲಕೃಷ್ಣ, ಶಾಸಕ
ಕಾರಾಗೃಹಗಳ ಮುಖ್ಯ ಅಧೀಕ್ಷಕ ಡಾ. ಪಿ.ರಂಗನಾಥ್, ನಗರಸಭೆ ಸದಸ್ಯರಾದ ಗಣಪತಿ ಮಂಡಗಳಲೆ, ಮಧುಮಾಲತಿ ಸೇರಿ ಹಲವರು ಇದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸ್ನೇಹಿತನಿಂದಲೇ ವ್ಯಕ್ತಿಯ ಕೊಲೆ, ಹೇಗಾಯ್ತು ಘಟನೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200