ಸಾಗರ : ವರದಾ ರಸ್ತೆಯಲ್ಲಿರುವ ಉಪ ಕಾರಾಗೃಹ ಕಟ್ಟಡದ (Jail Building) ರಿಪೇರಿ ಕಾಮಗಾರಿ ತ್ವರಿತಗತಿಯಲ್ಲಿ ಸಾಗಿದೆ. ಶೀಘ್ರವೇ ನವೀಕೃತ ಕಟ್ಟಡದ ಉದ್ಘಾಟನೆ ನಡೆಯಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.
ಉಪ ಕಾರಾಗೃಹ ಕಟ್ಟಡದ ದುರಸ್ತಿ ಕಾಮಗಾರಿಯನ್ನು ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣವಾಗಿದ್ದ ಉಪ ಕಾರಾಗೃಹ ಕಟ್ಟಡ ಶಿಥಿಲಗೊಂಡಿದ್ದ ಕಾರಣ ನವೀಕೃತ ಕಟ್ಟಡ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.
ಕಟ್ಟಡದ ನವೀಕರಣಕ್ಕೆ 1.16 ಕೋಟಿ ರೂ. ಮಂಜೂರಾಗಿದೆ. ಕಾರಾಗೃಹದ ವಾರ್ಡನ್ ಹಾಗೂ ಸಿಬ್ಬಂದಿ ವರ್ಗದವರಿಗೆ ವಸತಿ ಗೃಹ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಕಾರಾಗೃಹದ ಆವರಣದಲ್ಲಿ ಉದ್ಯಾನ ನಿರ್ಮಿಸಲಾಗುವುದು.
– ಬೇಳೂರು ಗೋಪಾಲಕೃಷ್ಣ, ಶಾಸಕ


ಕಾರಾಗೃಹಗಳ ಮುಖ್ಯ ಅಧೀಕ್ಷಕ ಡಾ. ಪಿ.ರಂಗನಾಥ್, ನಗರಸಭೆ ಸದಸ್ಯರಾದ ಗಣಪತಿ ಮಂಡಗಳಲೆ, ಮಧುಮಾಲತಿ ಸೇರಿ ಹಲವರು ಇದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸ್ನೇಹಿತನಿಂದಲೇ ವ್ಯಕ್ತಿಯ ಕೊಲೆ, ಹೇಗಾಯ್ತು ಘಟನೆ?
ಇದನ್ನೂ ಓದಿ:➤ ಚಿನ್ನದ ನಾಣ್ಯಗಳು, ಆನಂದಪುರದಲ್ಲಿ ಹರಪನಹಳ್ಳಿಯ ವ್ಯಕ್ತಿ ಅರೆಸ್ಟ್, ಲಕ್ಷ ಲಕ್ಷ ಹಣ ವಶಕ್ಕೆ, ಏನಿದು ಕೇಸ್?