ಶಿವಮೊಗ್ಗ ಲೈವ್.ಕಾಂ | 26 ಫೆಬ್ರವರಿ 2019
ಅಂಬರಗೋಡ್ಲು – ಕಳಸವಳ್ಳಿ ನಡುವಿನ ಸೇತುವೆಗೆ ಇದ್ದ ಅಡೆತಡೆಗಳೆಲ್ಲ ನಿವಾರಣೆಯಾಗಿದೆ. ಮೂರ್ನಾಲ್ಕು ದಿನದಲ್ಲಿ ಸಿಗಂದೂರು ಸೇತುವೆಗೆ ಕೇಂದ್ರ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಲಿದೆ ಅಂತಾ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
![]() |
ತುಮರಿಯಲ್ಲಿ ಡಿಜಿಟಲ್ ಗ್ರಾಮಕ್ಕೆ ಚಾಲನೆ ನೀಡಿದ ರಾಘವೇಂದ್ರ, ಕಳೆದ ವರ್ಷ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, 470 ಕೋಟಿಯ ಸಿಗಂದೂರು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ವನ್ಯಜೀವಿ ಸಂರಕ್ಷಣಾ ಇಲಾಖೆ ಮತ್ತು ಕೆಪಿಸಿ ಅಡ್ಡಗಾಲು ಹಾಕಿದ್ದರಿಂದ ಆತಂಕ ಸೃಷ್ಟಿಯಾಗಿತ್ತು. ಆದರೆ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಶಾಸಕ ಹಾಲಪ್ಪ ಅವರ ಪ್ರಯತ್ನದಿಂದಾಗಿ, ಸಮಸ್ಯೆಗಳು ನಿವಾರಣೆಯಾಗಿದೆ ಎಂದರು.
ಟೆಂಡರ್ ಹಾದಿ ಸುಗಮ
ಸಿಗಂದೂರು ಸೇತುವೆ ನಿರ್ಮಾಣ ಕಾಮಗಾರಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿದೆ. ಹಾಗಾಗಿ ಟೆಂಡರ್ ಪ್ರಕ್ರಿಯೆ ಸುಗಮವಾಗಿ ನಡೆಯಲಿದೆ ಎಂದು ಸಂಸದರ ರಾಘವೇಂದ್ರ ಸ್ಪಷ್ಟಪಡಿಸಿದರು.
ಶಾಸಕ ಹರತಾಳು ಹಾಲಪ್ಪ, ತಾಲೂಕ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ, ಡಿಜಿಟಲ್ ಇಂಡಿಯಾ ಯೋಜನೆಯ ರಾಜ್ಯ ಮುಖ್ಯಸ್ಥ ರಾಬರ್ಟ್ ಡಿ ನೆಲ್ಸನ್, ತಾಲೂಕು ಪಂಚಾಯಿತಿ ಸದಸ್ಯೆ ಸವಿತಾ ದೇವರಾಜ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200