ನಗರಸಭೆ ಸದಸ್ಯೆಯಿಂದ ಏಕಾಂಗಿ ಹೋರಾಟ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SAGARA | 9 ಜೂನ್ 2022 lady member protest 

ಚುನಾಯಿತ ಪ್ರತಿನಿಧಿಗೆ ಅಗೌರವ ತೋರಿದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರಸಭೆ ಸದಸ್ಯೆಯೊಬ್ಬರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಸಾಗರ ನಗರಸಭೆ ಪೌರಾಯುಕ್ತರ ಕಚೇರ ಮುಂಭಾಗ ಕಾಂಗ್ರೆಸ್ ಸದಸ್ಯೆಯೊಬ್ಬರು ಧರಣಿ ಕುಳಿತು ಅಕ್ರೋಶ ವ್ಯಕ್ತಪಡಿಸಿದರು. (lady member protest)

Shimoga Nanjappa Hospital

ನಗರಸಭೆ ಕಾಂಗ್ರೆಸ್ ಸದಸ್ಯೆ ಮಧು ಮಾಲತಿ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ತಮ್ಮ ವಾರ್ಡ್’ನ ಸಾರ್ವಜನಿಕರೊಬ್ಬರ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಲು ಬಂದಾಗ ವ್ಯವಸ್ಥಾಪಕರು ತಮ್ಮನ್ನು ದಬಾಯಿಸಿದ್ದಾರೆ ಎಂದು ಮಧು ಮಾಲತಿ ಆರೋಪಿಸಿದರು.

ಏನಿದು ಪ್ರಕರಣ?

ವಾರ್ಡ್’ನ ಸಾರ್ವಜನಿಕರೊಬ್ಬರು ಫಾರಂ ನಂಬರ್ 3 ಕೊಡಿಸುವಂತೆ ನಗರಸಭೆ ಸದಸ್ಯೆ ಮಧು ಮಾಲತಿ ಅವರಿಗೆ ಮನವಿ ಮಾಡಿದ್ದರು. ವ್ಯವಸ್ಥಾಪಕರನ್ನು ವಿಚಾರಿಸಿದಾಗ ಈ ಸ್ವತ್ತು ಮಾಡಿಸಿದರೆ ಮಾತ್ರ ಫಾರಂ ನಂಬರ್ 3 ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು. ಜಿಲ್ಲಾಧಿಕಾರಿ ಅವರ ಸೂಚನೆ ಮೇರೆಗೆ ಈ ರೀತಿ ಮಾಡಲಾಗುತ್ತಿದೆ ಎಂದು ವ್ಯವಸ್ಥಾಪಕರು ತಿಳಿಸಿದ್ದಾರೆ. ಈ ಕುರಿತು ಆದೇಶವಿದ್ದರೆ ತೋರಿಸುವಂತೆ ಕೇಳಿದಾಗ ವ್ಯವಸ್ಥಾಪಕರು ತಮ್ಮನ್ನು ಗದರಿಸಿದ್ದಾರೆ ಎಂದು ಮಧು ಮಾಲತಿ ಅವರು ಆರೋಪಿಸಿದರು.

ತಾವು ವಿಚಾರಿಸಿದಾಗ ಸಿಗದ ಫಾರಂ ನಂಬರ್ 3ಯನ್ನು ಮೇಸ್ತ್ರಿಯೊಬ್ಬರು ತಮ್ಮ ವಾರ್ಡ್’ನಲ್ಲಿ ಖಾತೆದಾರರಿಗೆ ತಂದು ಕೊಟ್ಟಿದ್ದಾರೆ. ಹಣ ಕೊಟ್ಟರೆ ನಗರಸಭೆಯಲ್ಲಿ ಯಾವುದೆ ರೀತಿಯ ಕೆಲಸವಾದರೂ ನಡೆಯುತ್ತದೆ. ಚುನಾಯಿತ ಪ್ರತಿನಿಧಿಗೆ ಗೌರವ ಕೊಡದಿರುವ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಧು ಮಾಲತಿ ಆಗ್ರಹಿಸಿದರು.

ಸ್ಥಳಕ್ಕೆ ಅಧ್ಯಕ್ಷರ ಭೇಟಿ

ಮಧು ಮಾಲತಿ ಅವರು ಧರಣಿ ನಡೆಸುತ್ತಿದ್ದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ಅವರು, ಸಮಸ್ಯೆ ಆಲಿಸಿದರು. ಚುನಾಯಿತ ಪ್ರತಿನಿಧಿಗೆ ಅಗೌರವ ತೋರುವುದನ್ನು ತಾವು ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. (lady member protest)

ಇದನ್ನೂ ಓದಿ – ಆನಂದಪುರ ಹೋಬಳಿಯ 300ಕ್ಕೂ ಹೆಚ್ಚು ರೈತರಿಗೆ ನೊಟೀಸ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 9, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment