ಶಿವಮೊಗ್ಗ ಲೈವ್.ಕಾಂ | SAGARA NEWS | 24 MARCH 2021
ನರಸೀಪುರದ ನಾಟಿ ಔಷಧ ನೀಡುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಕರೋನ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ನಾಟಿ ವೈದ್ಯರ ನಾರಾಯಣಮೂರ್ತಿ ಅವರ ಪುತ್ರ ರಾಘವೇಂದ್ರ, ಕರೋನ ಎರಡನೇ ಅಲೆ ಮತ್ತು ಲಾಕ್ ಡೌನ್ ಕುರಿತು ಚರ್ಚೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕವಾಗಿ ಔಷಧ ನೀಡುವುದನ್ನು ನಿಲ್ಲಿಸಿದ್ದೇವೆ ಎಂದು ತಿಳಿಸಿದರು.
ಇದನ್ನೂ ಓದಿ | ಕ್ಯಾನ್ಸರ್ಗೆ ಔಷಧಿ ನೀಡುತ್ತಿದ್ದ ಸಾಗರ ನರಸೀಪುರದ ನಾರಾಯಣಮೂರ್ತಿ ಇನ್ನಿಲ್ಲ
ಸಾಗರ ತಾಲೂಕು ಆನಂದಪುರ ಸಮೀಪದ ನರಸೀಪುರದಲ್ಲಿ ನಾಟಿ ಔಷಧ ನೀಡಲಾಗುತ್ತಿತ್ತು. ಲಾಕ್ ಡೌನ್ ಬಳಿಕ ಇಲ್ಲಿನ ಶಿವಗಂಗೆಯ ಗೋಡೋನ್ನಲ್ಲಿ ಔಷಧ ಕೊಡುತ್ತಿದ್ದರು. ಪ್ರತಿ ಗುರುವಾರ ಮತ್ತ ಭಾನುವಾರ ಔಷಧ ವಿತರಿಸಲಾಗುತ್ತಿತ್ತು. ವಿವಿಧ ಜಿಲ್ಲೆ ಮತ್ತು ರಾಜ್ಯದಿಂದ ಜನರು ಔಷಧ ಪಡೆಯಲು ಇಲ್ಲಿಗೆ ಬರುತ್ತಾರೆ. ನೆರೆಯ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕರೋನ ವ್ಯಾಪಕವಾಗಿ ಹರಡುತ್ತಿದೆ. ಆ ರಾಜ್ಯದಿಂದಲೂ ಇಲ್ಲಿಗೆ ಬರುವವರಿದ್ದಾರೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಇದನ್ನೂ ಓದಿ | ನರಸೀಪುರದ ನಾಟಿ ಔಷಧ ವಿತರಣೆ ಪುನಾರಂಭ, ಆದರೆ ಸ್ಥಳ ಬದಲಾವಣೆ ಆಗಿದೆ, ಎಲ್ಲಿ ಗೊತ್ತಾ?
ನಾಟಿ ಔಷಧ ನೀಡುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಕರೋನ ಕುರಿತು ಬೆಳವಣಿಗೆಗಳನ್ನು ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ರಾಘವೇಂದ್ರ ತಿಳಿಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]