ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಸಾಗರದ ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣದಲ್ಲಿ ಅ.1 ಮತ್ತು 2ರಂದು ರಾಷ್ಟ್ರ ಮಟ್ಟದ ದಸರಾ ಕುಸ್ತಿ (Kushti) ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಗಾಂಧಿನಗರ ಯುವಜನ ಸಂಘದ ಅಧ್ಯಕ್ಷ ಸಂತೋಷ್ ಹೇಳಿದರು.
ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ಬಂಗಾರದ ಬೆಡಗು ಶೀರ್ಷಿಕೆಯಡಿ ಎರಡು ದಿನಗಳ ಕುಸ್ತಿ ಪಂದ್ಯಾವಳಿ ನಡೆಯಲಿದೆ. ಕಳೆದ 49 ವರ್ಷಗಳಿಂದ ಗಾಂಧಿನಗರ ಯುವಜನ ಸಂಘ ಕಲೆ, ಸಾಹಿತ್ಯ, ಸಾಂಸ್ಕೃತಿಕ, ಜಾನಪದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಸಂಘವು ಸುವರ್ಣ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಕುಸ್ತಿ ಪಂದ್ಯಾವಳಿ ಹಮ್ಮಿಕೊಂಡಿದೆ ಎಂದರು.
ಬೆಳ್ಳಿ ಗದೆ, ಬಂಗಾರದ ಬಳೆ, ಅಖಾಡ ಬಳೆ, ಪರ್ಸಿ ಬಳೆ ಸೇರಿ ಆಕರ್ಷಕ ನಗದು ಬಹುಮಾನ ಇಡಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಹರ್ಯಾಣ, ಪಂಜಾಬ್, ದೆಹಲಿ, ಬೆಳಗಾವಿ ಸೇರಿ ದೇಶದ ಬೇರೆಬೇರೆ ಭಾಗಗಳಿಂದ ಪೈಲ್ವಾನರು ಪಂದ್ಯಾವಳಿಗೆ ಆಗಮಿಸುತ್ತಿದಾರೆ. ಸುಮಾರು 120 ಜೋಡಿ ಅಖಾಡಕ್ಕೆ ಇಳಿಯುವ ಸಾಧ್ಯತೆ ಇದೆ. ಜತೆಗೆ ಮಹಿಳಾ ಕುಸ್ತಿ ಪಂದ್ಯಾವಳಿ ನಡೆಸಲಾಗುತ್ತಿದೆ ಎಂದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಹಬ್ಬದ ಖರೀದಿ ಅಬ್ಬರ, ಗಾಂಧಿ ಬಜಾರ್, ಹೂವಿನ ಮಾರುಕಟ್ಟೆಯಲ್ಲಿ ಜನಸಾಗರ
ಧರ್ಮರಾಜ್, ಡಾ. ಶ್ರೀಪಾದ ಹೆಗಡೆ, ಕೆ.ಜಿ.ಸಂತೋಷ್, ವೆಂಕಟೇಶ್, ಗಣೇಶ್, ಶ್ರೀನಿಧಿ, ಕೃಷ್ಣಾನಂದ್, ರಾಘವೇಂದ್ರ ಇತರರಿದ್ದರು.
National level Kushti
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






