ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | TUMARI NEWS | 9 ಜುಲೈ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಅಮವಾಸ್ಯೆ ಹಿನ್ನೆಲೆ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಇವತ್ತು ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಬಹುತೇಕರು ಕೋವಿಡ್ ನಿಯಮಕ್ಕೆ ಕ್ಯಾರೆ ಅನ್ನದಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಅಮವಾಸ್ಯೆ ಮತ್ತು ಶುಕ್ರವಾರ ಆದ್ದರಿಂದ ಶ್ರೀ ಚೌಡೇಶ್ವರಿ ದೇವಿ ದರ್ಶನಕ್ಕೆ ಬೆಳಗ್ಗೆಯಿಂದ ದೊಡ್ಡ ಸಂಖ್ಯೆಯ ಭಕ್ತರು ಬರುತ್ತಿದ್ದಾರೆ. ದೂರದ ಊರುಗಳಿಂದ ವಾಹನಗಳಲ್ಲಿ ಬರುತ್ತಿರುವ ಭಕ್ತರು ಲಾಂಚ್‍ನಲ್ಲಿ ಹೊಳೆ ದಾಟುತ್ತಿದ್ದಾರೆ.
ಕೋವಿಡ್ ನಿಯಮ ಮಾಯ
ಲಾಕ್ ಡೌನ್ ಇದ್ದ ಹಿನ್ನೆಲೆ ಸಿಗಂದೂರಿನಲ್ಲಿ ದೇಗುಲ ಬಂದ್ ಮಾಡಲಾಗಿತ್ತು. ಒಂದು ವಾರದಿಂದ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇವತ್ತು ದೇವಸ್ಥಾನಕ್ಕೆ ಬಂದ ಬಹುತೇಕ ಭಕ್ತರು ಕೋವಿಡ್ ನಿಯಮವನ್ನು ಗಾಳಿಗೆ ತೂರಿದ್ದಾರೆ. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರವನ್ನು ಕಾಪಾಡುತ್ತಿಲ್ಲ. ಇದು ದ್ವೀಪದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಮೂರನೆ ಅಲೆಯ ಭೀತಿಯ ನಡುವೆ ಪ್ರವಾಸಿಗರು ಕೋವಿಡ್ ನಿಯಮಗಳನ್ನು ಪಾಲಿಸದಿರುವುದು ಸ್ಥಳೀಯರ ಚಿಂತೆಗೀಡು ಮಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲೂ ಆತಂಕ ವ್ಯಕ್ತಪಡಿಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200