ಶಿವಮೊಗ್ಗ ಲೈವ್.ಕಾಂ | SAGARA NEWS | 19 JUNE 2021
ಸಾಗರ ನಗರಸಭೆ ವಿತರಣೆ ಮಾಡಿರುವ ದಿನಸಿ ಕಿಟ್ ಮೇಲೆ ವಿಧಾನ ಪರಿಷತ್ ಸದಸ್ಯರು ಮತ್ತು ಅಧ್ಯಕ್ಷೆಯ ಫೋಟೊ ಕೈಬಿಟ್ಟಿರುವುದು ಆಕ್ಷೇಪಕ್ಕೆ ಕಾರಣವಾಗಿದೆ.
ನಗರಸಭೆ ವತಿಯಿಂದ ದಿನಸಿ ಕಿಟ್‍ಗಳ ವಿತರಣೆ ಮಾಡಲಾಗುತ್ತಿದೆ. ಇದರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಾಗರ ಶಾಸಕ ಹರತಾಳು ಹಾಲಪ್ಪ ಅವರ ಫೋಟೊಗಳನ್ನು ಪ್ರಕಟಿಸಲಾಗಿದೆ.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಐ.ಎನ್.ಸುರೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಅವರ ಫೋಟೊವನ್ನು ದಿನಸಿ ಕಿಟ್ ಮೇಲೆ ಮುದ್ರಿಸಬೇಕಿತ್ತು. ಅವರು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‍ಗೆ ಆಯ್ಕೆಯಾಗಿದ್ದಾರೆ. ಅವರ ಭಾವಿಚಿತ್ರವನ್ನು ಕೈಬಿಟ್ಟು ಶಿಷ್ಟಾಚಾರ ಉಲ್ಲಂಘಿಸಲಾಗಿದೆ. ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅಧ್ಯಕ್ಷೆಯ ಫೋಟೋ ಕೈಬಿಡಲಾಗಿದೆ
ಇನ್ನು ಸಾಗರ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ ಅವರ ಫೋಟೊ ಮುದ್ರಿಸದಿರುವುದಕ್ಕೆ ದಲಿತ ಸಂಘರ್ಷ ಸಮಿತಿ ಮುಖಂಡ ಪರಮೇಶ್ವರ ದೂಗೂರು ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರಥಮ ಪ್ರಜೆಯನ್ನೆ ನಿರ್ಲಕ್ಷ ಮಾಡಿರುವುದು ಸರಿಯಲ್ಲ ಎಂದು ಆರೋಪಿಸಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]