ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA NEWS | 14 ಜುಲೈ 2021
ಕರೊನಾ ಲಸಿಕೆ ಇಲ್ಲ ಎಂಬ ಬೋರ್ಡ್ ಸಾರ್ವಜನಿಕರಿಗೆ ದರ್ಶನವಾಗುವುದು ಸಾಮಾನ್ಯ. ಆದರೆ ಮಾಜಿ ಸಚಿವರು ಕೂಡ ವ್ಯಾಕ್ಸಿನ್ ಸಿಗದೆ ಮನೆಗೆ ವಾಪಸಾಗಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೌದು, ಇಂತಹ ಸನ್ನಿವೇಶ ಎದುರಾಗಿದ್ದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ. ಕರೊನಾ ಎರಡನೇ ಡೋಸ್ ಲಸಿಕೆ ತೆಗೆದು ಕೊಳ್ಳಿ ಎಂಬ ಮೊಬೈಲ್ ಸಂದೇಶ ಬಂದಿದ್ದರಿಂದ ಕೋವಿಶೀಲ್ಡ್ ಲಸಿಕೆ ಪಡೆಯಲು ಸಾಗರದ ದೇವರಾಜ ಅರಸು ಸಭಾಭವನಕ್ಕೆ ಕಾಗೋಡು ತಿಮ್ಮಪ್ಪ ಆಗಮಿಸಿದ್ದರು. ಆದರೆ ಅವರಿಗೆ ಲಸಿಕೆ ಸ್ಟಾಕ್ ಇಲ್ಲ ಎಂಬ ಫಲಕ ಎದುರಾಯಿತು.
ಸುದ್ದಿಗಾರರೊಂದಿಗೆ ಮಾತನಾಡಿದ ಕಾಗೋಡು ತಿಮ್ಮಪ್ಪ, ಕೇಂದ್ರ ಮತ್ತು ರಾಜ್ಯ ಸರ್ಕಾರ ಲಸಿಕೆ ವಿತರಣೆಗೆ ವೇಗ ನೀಡಬೇಕು. ನಗರ ಮತ್ತು ಗ್ರಾಮಾಂತರ ಪ್ರದೇಶದಿಂದ ಲಸಿಕೆ ಪಡೆಯಲು ಜನ ಬರುತ್ತಿದ್ದಾರೆ. ಆದರೆ ಲಸಿಕೆ ದಾಸ್ತಾನು ಇಲ್ಲ ಎನ್ನುವ ಬೋರ್ಡ್ ನೋಡಿಕೊಂಡು ಮರಳುವ ಪರಿಸ್ಥಿತಿ ನಿರ್ಮಾಣವಾಗಿರುವುದು ದುರದೃಷ್ಟಕರ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗ್ರಾಮೀಣ ಭಾಗದ ಆರೋಗ್ಯ ಕೇಂದ್ರಗಳಿಗೆ ಸರಿಯಾಗಿ ಲಸಿಕೆ ಪೂರೈಕೆಯಾಗುತ್ತಿಲ್ಲ. ಶೇ.2 ಪ್ರಮಾಣದಲ್ಲಿ ಮಾತ್ರ ಲಸಿಕೆ ಪೂರೈಸಲಾಗುತ್ತಿದೆ. ಹಳ್ಳಿಯವರು ಅನಿವಾರ್ಯವಾಗಿ ಲಸಿಕೆ ಪಡೆಯಲು ನಗರಗಳಿಗೆ ಬರುವ ಸ್ಥಿತಿಯನ್ನು ಸರ್ಕಾರ, ಆರೋಗ್ಯ ಇಲಾಖೆ ನಿರ್ಮಿಸಿದೆ. ಜನರು ಹಳ್ಳಿಗಳಲ್ಲೇ ಲಸಿಕೆ ಪಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕೆಪಿಸಿಸಿ ಕಾರ್ಯದರ್ಶಿ ಡಾ. ರಾಜನಂದಿನಿ ಕಾಗೋಡು ಇದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200