ಮಾಜಿ ಸಚಿವರಿಗೂ ತಟ್ಟಿತು ಕರೋನ ವ್ಯಾಕ್ಸಿನ್ ಅಭಾವದ ಬಿಸಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA NEWS | 14 ಜುಲೈ 2021

ಕರೊನಾ ಲಸಿಕೆ ಇಲ್ಲ ಎಂಬ ಬೋರ್ಡ್ ಸಾರ್ವಜನಿಕರಿಗೆ ದರ್ಶನವಾಗುವುದು ಸಾಮಾನ್ಯ. ಆದರೆ ಮಾಜಿ ಸಚಿವರು ಕೂಡ ವ್ಯಾಕ್ಸಿನ್ ಸಿಗದೆ ಮನೆಗೆ ವಾಪಸಾಗಿದ್ದಾರೆ.

ಹೌದು, ಇಂತಹ ಸನ್ನಿವೇಶ ಎದುರಾಗಿದ್ದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ. ಕರೊನಾ ಎರಡನೇ ಡೋಸ್ ಲಸಿಕೆ ತೆಗೆದು ಕೊಳ್ಳಿ ಎಂಬ ಮೊಬೈಲ್ ಸಂದೇಶ ಬಂದಿದ್ದರಿಂದ ಕೋವಿಶೀಲ್ಡ್‍ ಲಸಿಕೆ ಪಡೆಯಲು ಸಾಗರದ ದೇವರಾಜ ಅರಸು ಸಭಾಭವನಕ್ಕೆ ಕಾಗೋಡು ತಿಮ್ಮಪ್ಪ ಆಗಮಿಸಿದ್ದರು. ಆದರೆ ಅವರಿಗೆ ಲಸಿಕೆ ಸ್ಟಾಕ್ ಇಲ್ಲ ಎಂಬ ಫಲಕ ಎದುರಾಯಿತು.

ಸುದ್ದಿಗಾರರೊಂದಿಗೆ ಮಾತನಾಡಿದ ಕಾಗೋಡು ತಿಮ್ಮಪ್ಪ, ಕೇಂದ್ರ ಮತ್ತು ರಾಜ್ಯ ಸರ್ಕಾರ ಲಸಿಕೆ ವಿತರಣೆಗೆ ವೇಗ ನೀಡಬೇಕು. ನಗರ ಮತ್ತು ಗ್ರಾಮಾಂತರ ಪ್ರದೇಶದಿಂದ ಲಸಿಕೆ ಪಡೆಯಲು ಜನ ಬರುತ್ತಿದ್ದಾರೆ. ಆದರೆ ಲಸಿಕೆ ದಾಸ್ತಾನು ಇಲ್ಲ ಎನ್ನುವ ಬೋರ್ಡ್ ನೋಡಿಕೊಂಡು ಮರಳುವ ಪರಿಸ್ಥಿತಿ ನಿರ್ಮಾಣವಾಗಿರುವುದು ದುರದೃಷ್ಟಕರ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮೀಣ ಭಾಗದ ಆರೋಗ್ಯ ಕೇಂದ್ರಗಳಿಗೆ ಸರಿಯಾಗಿ ಲಸಿಕೆ ಪೂರೈಕೆಯಾಗುತ್ತಿಲ್ಲ. ಶೇ.2 ಪ್ರಮಾಣದಲ್ಲಿ ಮಾತ್ರ ಲಸಿಕೆ ಪೂರೈಸಲಾಗುತ್ತಿದೆ. ಹಳ್ಳಿಯವರು ಅನಿವಾರ್ಯವಾಗಿ ಲಸಿಕೆ ಪಡೆಯಲು ನಗರಗಳಿಗೆ ಬರುವ ಸ್ಥಿತಿಯನ್ನು ಸರ್ಕಾರ, ಆರೋಗ್ಯ ಇಲಾಖೆ ನಿರ್ಮಿಸಿದೆ. ಜನರು ಹಳ್ಳಿಗಳಲ್ಲೇ ಲಸಿಕೆ ಪಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕೆಪಿಸಿಸಿ ಕಾರ್ಯದರ್ಶಿ ಡಾ. ರಾಜನಂದಿನಿ ಕಾಗೋಡು ಇದ್ದರು.

217389951 1153288501817725 4096501658035425233 n.jpg? nc cat=102&ccb=1 3& nc sid=730e14& nc ohc=NI8ByLd 2YQAX eTTxq&tn=XgSJ3kUX1No5RJvs& nc ht=scontent.fblr1 6

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment