ಎರಡು ಬೈಕುಗಳಿಗೆ ಎದುರಿನಿಂದ ಬಂದು ಡಿಕ್ಕಿ ಹೊಡೆದ ಲಾರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಸಾಗರ | ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಎದುರಿನಿಂದ ಬರುತ್ತಿದ್ದ ಎರಡು ಬೈಕ್’ಗಳಿಗೆ ಡಿಕ್ಕಿ (ACCIDENT) ಹೊಡೆದು, ರಸ್ತೆ ಪಕ್ಕದ ಗುಂಡಿಗೆ ಹೋಗಿ ನಿಂತಿದೆ. ಘಟನೆಯಲ್ಲಿ ಓರ್ವ ಬೈಕ್ ಸಾವರ ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ.

Shimoga Nanjappa Hospital

ಸಾಗರ ತಾಲೂಕಿನ ಹಕ್ರೆಗೊಪ್ಪ ತಿರುವಿನಲ್ಲಿ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ, ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳಿಸಿರೆ ಗ್ರಾಮದ ಪ್ರೇಮಾನಂದ (51) ಮೃತಪಟ್ಟಿದ್ದಾರೆ.

ಹೇಗಾಯ್ತು ಘಟನೆ?

ಪ್ರೇಮಾನಂದ ಅವರು ತಮ್ಮ ಪತ್ನಿ ಪಾಲಾಕ್ಷಮ್ಮ ಅವರೊಂದಿಗೆ ಬುಲೆಟ್ ಬೈಕಿನಲ್ಲಿ ಬೆಳ್ಳಿಬೈಲು ಗ್ರಾಮಕ್ಕೆ ತೆರಳುತ್ತಿದ್ದರು. ಇವರ ಹಿಂಬದಿಯಲ್ಲೇ ಹಿರೇನಲ್ಲೂರು ಗ್ರಾಮದ ಸಂತೋಷ್ ಮತ್ತು ಸಂದೀಪ್ ಎಂಬುವವರು ಪಲ್ಸರ್ ಬೈಕಿನಲ್ಲಿ ಬರುತ್ತಿದ್ದರು. ಹಕ್ರೆಕೊಪ್ಪದ ಬಳಿ ಎದುರಿನಿಂದ ಬಂದ ಲಾರಿಯೊಂದು ಏಕಾಏಕಿ ಬುಲೆಟ್ ಮತ್ತು ಪಲ್ಸರ್ ಬೈಕುಗಳಿಗೆ ಡಿಕ್ಕಿ (ACCIDENT) ಹೊಡೆದಿದೆ.

ಘಟನೆಯಲ್ಲಿ ಪ್ರೇಮಾನಂದ ಅವರ ತಲೆಗೆ ತೀವ್ರ ಪೆಟ್ಟಾಗಿದೆ. ಸ್ಥಳದಲ್ಲೆ ಅವರು ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ. ಪತ್ನಿ ಪಾಲಾಕ್ಷಮ್ಮ ಅವರಿಗೆ ಗಂಭೀರ ಗಾಯವಾಗಿದೆ. ಪಲ್ಸರ್ ಬೈಕಿನಲ್ಲಿದ್ದ ಸಂತೋಷ್ ಮತ್ತು ಸಂದೀಪ್ ಅವರು ಬೈಕ್ ಬಿಟ್ಟು ಹಾರಿದ್ದಾರೆ. ಪಕ್ಕದ ಹಳ್ಳಕ್ಕೆ ಬಿದ್ದು ಗಾಯಗೊಂಡಿದ್ದಾರೆ.

ಬೈಕುಗಳಿಗೆ ಡಿಕ್ಕಿ ಹೊಡೆದ ಲಾರಿ ರಸ್ತೆ ಪಕ್ಕದ ತಗ್ಗಿನಲ್ಲಿ ಇಳಿದಿದೆ. ಎರಡು ಬೈಕುಗಳು ನುಜ್ಜುಗುಜ್ಜಾಗಿವೆ. ಗಾಯಾಳುಗಳಿಗೆ ಸಾಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಲಾರಿ ಚಾಲಕನು ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ – ರಿಪ್ಪನ್ ಪೇಟೆ ರಸ್ತೆಯಲ್ಲಿ ಹಿಟ್ ಅಂಡ್ ರನ್ ಕೇಸ್, ಬೈಕ್ ಸವಾರ ಸಾವು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 7, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment