ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA NEWS | 01 ಅಕ್ಟೋಬರ್ 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೊಬೈಲ್ ನೆಟ್ ವರ್ಕ್’ಗಾಗಿ ನಡೆಯುತ್ತಿರುವ ಹೋರಾಟ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಗಾಂಧಿ ಜಯಂತಿಯಂದು ಪಾದಯಾತ್ರೆ ಮತ್ತು ರಸ್ತೆ ತಡೆ ಮಾಡಲು ಜನರು ನಿರ್ಧರಿಸಿದ್ದಾರೆ
ಸಾಗರ ತಾಲೂಕು ಶರಾವತಿ ಹಿನ್ನೀರು ಪ್ರದೇಶದ ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟಿನಕಾರು, ಕಾರಣಿ, ಹಾಳಸಸಿ ಸೇರಿದಂತೆ ಸುತ್ತಮುತ್ತ ಪ್ರದೇಶದಲ್ಲಿ ಮೊಬೈಲ್ ನೆಟ್ ವರ್ಕ್ ಮರೀಚಿಕೆಯಾಗಿದೆ.
ಇದನ್ನು ಓದಿ | ನೋ ನೆಟ್ವರ್ಕ್, ನೋ ವೋಟಿಂಗ್, ಗ್ರಾಮಸ್ಥರಿಂದ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ಬಹಿಷ್ಕಾರದ ವಾರ್ನಿಂಗ್
ಇದೆ ಕಾರಣಕ್ಕೆ ಚುನಾವಣೆ ಬಹಿಷ್ಕಾರಿಸಲು ಈ ಭಾಗದ ಜನರು ನಿರ್ಧರಿಸಿದ್ದಾರೆ. ಇಷ್ಟಾಗಿಯೂ ನೆಟ್ ವರ್ಕ್ ಒದಗಿಸಲು ಆಡಳಿತ ಕ್ರಮ ಕೈಗೊಂಡಿಲ್ಲ. ಹಾಗಾಗಿ ಹೋರಾಟ ಮತ್ತೊಂದು ಸ್ವರೂಪ ಪಡೆದುಕೊಂಡಿದೆ.
ಪಾದಯಾತ್ರೆ, ರಸ್ತೆ ತಡೆಗೆ ಪ್ಲಾನ್
ನೆಟ್ ವರ್ಕ್ ವಂಚಿತ ಗ್ರಾಮದ ಜನರು ಗಾಂಧಿ ಜಯಂತಿಯಂದು ಪಾದಯಾತ್ರೆ ಕೈಗೊಳ್ಳಲು ನಿರ್ಧರಿಸಿದಾರೆ. ಅಲ್ಲದೆ ಸಾಗರ ಭಟ್ಕಳ ಹೈವೇ ರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರತಿಭಟಿಸಲು ತೀರ್ಮಾನಿಸಿದ್ದಾರೆ.
ಇದನ್ನು ಓದಿ | 5ಜಿ ಯುಗದಲ್ಲೂ ಇಲ್ಲ ಸಿಗ್ನಲ್, ನೆಟ್ವರ್ಕ್ಗಾಗಿ ಮರದಡಿ ಟೆಂಟ್, ಆನ್ಲೈನ್ ಕ್ಲಾಸ್ಗಾಗಿ 12 ಕಿ.ಮೀ ಹೋಗ್ತಾರೆ ಸ್ಟೂಡೆಂಟ್ಸ್
ಕಟ್ಟಿನಕಾರು ಗ್ರಾಮದಿಂದ ಕೋಗಾರು ವರೆಗೆ ಪಾದಯಾತ್ರೆ ನಡೆಯಲಿದೆ. ಶಾಂತಿಯುತವಾಗಿ ಹೋರಾಟ ಮಾಡಲು ನೆಟ್ವರ್ಕ್ ಹೋರಾಟ ಸಮಿತಿ ನಿರ್ಧರಿಸಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200