SHIVAMOGGA LIVE NEWS | 1 SEPTEMBER 2023
SAGARA : ರಕ್ಷಾ ಬಂಧನ (raksha bandhan) ಆಚರಣೆ ಮಾಡಿದ್ದ ಮಕ್ಕಳ ಕೈಯಿಂದ ರಾಖಿ ಬಿಚ್ಚಿಸಿ, ಮರುದಿನ ಮಕ್ಕಳನ್ನು ತರಗತಿಯಿಂದ ಹೊರಗೆ ನಿಲ್ಲಿಸಿದ್ದ ಆರೋಪದ ಹಿನ್ನೆಲೆ ಶಾಲೆಯ ಮುಖ್ಯ ಶಿಕ್ಷಕಿ ಮತ್ತು ಪೋಷಕರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೋಷಕರಿಗೆ ಬೆಂಬಲ ಸೂಚಿಸಿ ಮುಖ್ಯ ಶಿಕ್ಷಕಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಲೆಯಲ್ಲಿ ರಾಖಿ ಬಿಚ್ಚಿಸಿದ್ದರು
ಸಾಗರದ ಖಾಸಗಿ ಶಾಲೆಯೊಂದರಲ್ಲಿ ಮಕ್ಕಳು ರಾಖಿ ಹಬ್ಬ ಆಚರಿಸಿದ್ದರು. 9ನೇ ತರಗತಿಯ ವಿದ್ಯಾರ್ಥಿಯೊಬ್ಬನಿಗೆ ವಿದ್ಯಾರ್ಥಿನಿಯೊಬ್ಬಳು ರಾಖಿ ಕಟ್ಟಿದ್ದಳು. ಈ ವೇಳೆ ಇತರೆ ವಿದ್ಯಾರ್ಥಿಗಳು ಚಪ್ಪಾಳೆ ತಟ್ಟಿದ್ದರು. ಮನನೊಂದ ವಿದ್ಯಾರ್ಥಿ ಬಾತ್‌ರೂಂಗೆ ಹೋಗಿ ಬಾಗಿಲು ಹಾಕಿ ಅತ್ತಿದ್ದ ಎಂದು ಹೇಳಲಾಗುತ್ತಿದೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿ ಬಾಲಕನ ಕೈಯಿಂದ ರಾಖಿ ತೆಗೆಸಿದ್ದರು. ಇತರೆ ವಿದ್ಯಾರ್ಥಿಗಳ ಕೈಯಲ್ಲಿದ್ದ ರಾಖಿಯನ್ನು ಬಿಚ್ಚಿಸಿದ್ದರು ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮೊದಲ ದಿನ 655 ವಾಹನ ಸವಾರರ ಮೊಬೈಲ್‌ಗೆ ನೊಟೀಸ್, ಕ್ಯಾಮರಾದಲ್ಲಿ ಯಾವ್ಯಾವ ಉಲ್ಲಂಘನೆ ಪತ್ತೆಯಾಯ್ತು?
ತರಗತಿಯಿಂದ ಹೊರಗೆ ನಿಲ್ಲಿಸಿದ್ದರು
ಇನ್ನು, ಮರುದಿನ ಪುನಃ ವಿದ್ಯಾರ್ಥಿಗಳು ರಾಖಿ ಕೊಟ್ಟಿಕೊಂಡು ಬಂದಿದ್ದರು. ಹಾಗಾಗಿ ಅಂತಹ ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಗೆ ನಿಲ್ಲಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಪೋಷಕರು ಶಾಲೆಗೆ ಭೇಟಿ ನೀಡಿ ಮುಖ್ಯ ಶಿಕ್ಷಕರ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಕೂಡ ಶಾಲೆಗೆ ತೆರಳಿ ಮುಖ್ಯ ಶಿಕ್ಷಕಿ ಜೊತೆಗೆ ಮಾತಿನ ಚಕಮಕಿ ನಡೆಸಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೀದಿ ನಾಟಕಕ್ಕೆ ಕಲಾ ತಂಡಗಳ ಆಯ್ಕೆ, ಯಾರೆಲ್ಲ ಪಾಲ್ಗೊಳ್ಳಬಹುದು? ಷರತ್ತುಗಳೇನು?
ಸಾಗರ ಡಿವೈಎಸ್‌ಪಿ ಗೋಪಾಲಕೃಷ್ಣ ನಾಯ್ಕ್, ಸರ್ಕಲ್ ಇನ್ಸ್‌ಪೆಕ್ಟರ್ ಸೀತಾರಾಮ್, ಕೃಷ್ಣಪ್ಪ, ತಹಶೀಲ್ದಾರ್ ಚಂದ್ರಶೇಖರ ನಾಯ್ಕ್, ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಹಿಂದೂ ಪರ ಸಂಘಟನೆಯ ಕೋಮಲ್ ರಾಘವೇಂದ್ರ, ಸಂತೋಷ್, ರಾಘವೇಂದ್ರ ಕಾಮತ್, ಆಟೋ ಗಣೇಶ್, ಕುಮಾರ್ ಶೆಟ್ಟಿ, ಶ್ರೀಧರ್ ಸಾಗರ, ಪ್ರತಿಮಾ ಜೋಗಿ, ಕಿರಣ್, ನವೀನ್ ಯಳವರಸಿ ಸೇರಿದಂತೆ ಇನ್ನಿತರರು ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200