ಸಾಗರದಲ್ಲಿ ಪೊಲೀಸರ ದಾಳಿ, ಪೆಡ್ಲರ್‌ ಅರೆಸ್ಟ್‌. ಏನಿದು ಕೇಸ್‌?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಸಾಗರ: ನಗರದ ಕೃಷ್ಣ ಗ್ಯಾರೇಜ್ ರಸ್ತೆಯ ಗೋದಾಮಿನಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಾಗರ ಟೌನ್ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಅಕ್ಬರ್ ಬೇಗ್ (40) ಬಂಧಿತ ಆರೋಪಿ. ಈತ ಗೋದಾಮಿನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಾಗರ ಟೌನ್ ಪೊಲೀಸ್ ಇನ್ಸ್‌ಪೆಕ್ಟರ್ ಅವರು ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. ಬಂಧಿತನಿಂದ ₹7,500 ಮೌಲ್ಯದ 156 ಗ್ರಾಂ ಗಾಂಜಾ ಹಾಗೂ ₹25,000 ಮೌಲ್ಯದ 10 ಗ್ರಾಂ 750 ಮಿಲಿ ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Sagara-Police-Arrest-a-person-in-NDPS-Case