ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
ಸಾಗರ: ಸಂಚಾರ ನಿಯಮಗಳ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಸಾಗರ ನಗರ ವ್ಯಾಪ್ತಿಯಲ್ಲಿ ಪೊಲೀಸರು ಹೆಲ್ಮೆಟ್ ಧರಿಸಿದ ದ್ವಿಚಕ್ರ ವಾಹನ ಸವಾರರಿಗೆ ಗುಲಾಬಿ (Rose) ಹೂ ನೀಡುವ ಮೂಲಕ ಗೌರವಿಸಿದ್ದಾರೆ.
ಇನ್ನು ಮುಂದೆ ಎಲ್ಲಾ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಈ ನಿಟ್ಟಿನಲ್ಲಿ ಇಲಾಖೆ ಜಾಗೃತಿ ಮೂಡಿಸಲು ಮುಂದಾಗಿದೆ. ಇನ್ನು ಮುಂದೆ ವಾಹನ ಸವಾರರು ಹೆಲ್ಮೆಟ್ ಧರಿಸದೆ ಇದ್ದಲ್ಲಿ ದಂಡ ವಿಧಿಸಲಾಗುವುದು ಎಂದು ನಗರ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ಪುಲ್ಲಯ್ಯ ರಾಥೋಡ್ ತಿಳಿಸಿದ್ದಾರೆ.
ಹೆಲ್ಮೆಟ್ ಧರಿಸದ ಕಾರಣ ಅಪಘಾತವಾದಾಗ ಅನೇಕ ದ್ವಿಚಕ್ರ ವಾಹನ ಸವಾರರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಹೆಲ್ಮೆಟ್ ಧರಿಸಿದ ಕಾರಣ ಹಲವರ ಜೀವ ಉಳಿದಿದೆ. ಈ ಅಂಶ ಮನಗಾಣಬೇಕು ಎಂದು ತಿಳಿಸಿದರು.

ಇದನ್ನೂ ಓದಿ » ಮಾಚೇನಹಳ್ಳಿಯಲ್ಲಿ ಜಾಗೃತಿ ಕಾರ್ಯಾಗಾರ, ಯಾರೆಲ್ಲ ಭಾಗವಹಿಸ್ತಾರೆ?

