ಸಾಗರದ ಮಸೀದಿ ಮೇಲೆ ತಹಶೀಲ್ದಾರ್, ಪೊಲೀಸರಿಂದ ದಾಳಿ, 25ಕ್ಕೂ ಹೆಚ್ಚು ಜನರ ಮೇಲೆ ಕೇಸ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SAGARA NEWS | 1 MAY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಜಾತ್ರೆ, ಸಮಾರಂಭ, ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧವಿದೆ. ಹಾಗಿದ್ದೂ ಸಾಗರದ ಆಜಾರ್‍ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲಾಗಿದೆ. ಈ ಸಂಬಂಧ ಮಾಹಿತಿ ಲಭ್ಯವಾಗುತ್ತಿದ್ದಂತೆ ಅಧಿಕಾರಿಗಳು ದಾಳಿ ನಡೆಸಿ, ಪ್ರಾರ್ಥನೆಯಲ್ಲಿ ಭಾಗವಹಿಸಿದ್ದವರ ವಿರುದ್ಧ  ಪ್ರಕರಣ ದಾಖಲಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ ಸುಮಾರು 25 ಮಂದಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದರು. ಈ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ದಿಢೀರ್ ದಾಳಿ ನಡೆಸಿದ ಪೊಲೀಸರು ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದವರನ್ನು ವಶಕ್ಕೆ ಪಡೆದರು.

ಇದನ್ನೂ ಓದಿ – ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಕರೋನಾಘಾತ, ಸಾರ್ವಜನಿಕರಿಗಿಲ್ಲ ಪ್ರವೇಶ

ಡಿವೈಎಸ್‍ಪಿ ವಿನಾಯಕ ಶೇಟಗೆರಿ ನೇತೃತ್ವದಲ್ಲಿ ಸಾಗರ ನಗರ ಠಾಣೆ ಇನ್ಸ್‍ಪೆಕ್ಟರ್ ಅಶೋಕ್‍ ಕುಮಾರ್ ಮತ್ತು ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

ತಹಶೀಲ್ದಾರ್ ಚಂದ್ರೇಖರ್ ನಾಯಕ್, ಸಿಡಿಪಿಒ ಸಂತೋಷ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೆಚ್ಚು ಜನರು ಒಂದೆಡೆ ಸೇರುವುದರಿಂದ ಸೋಂಕು ವ್ಯಾಪಕವಾಗಿ ಹರಡುವ ಸಾದ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆ, ಜಾತ್ರೆಗಳುನ್ನು ಸರ್ಕಾರ ನಿರ್ಬಂಧಿಸಿದೆ.

ಇದನ್ನೂ ಓದಿ – ತೀರ್ಥಹಳ್ಳಿಯ ಎರಡು ಅಂಗಡಿಗಳ ಮೇಲೆ ದಿಢೀರ್ ದಾಳಿ, ಮಾಲೀಕರ ವಿರುದ್ಧ ಕೇಸ್, ಕಾರಣವೇನು?

Covid 19 Vaccination Kan poster 1 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment