ಸಾಗರ: ತಾಲೂಕಿನ ಆನಂದಪುರ ಸಮೀಪದ ತ್ಯಾಗರ್ತಿ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ (laterite) ಕಲ್ಲುಗಳನ್ನು ಗಣಿಗಾರಿಕೆ ಮಾಡಿ ಸಾಗಿಸುತ್ತಿದ್ದ ಲಾರಿಯೊಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಜಂಬಿಟ್ಟಿಗೆ ಕಲ್ಲುಗಳನ್ನು ಲಾರಿಯಲ್ಲಿ ತುಂಬಿಸಿಕೊಂಡು ಸಾಗಿಸಲಾಗುತ್ತಿತ್ತು. ಪೊಲೀಸರು ವಾಹನವನ್ನು ತಡೆದು ನಿಲ್ಲಿಸಲು ಪ್ರಯತ್ನಿಸಿದಾಗ ಚಾಲಕ ಲಾರಿಯನ್ನು ಬಿಟ್ಟು ಸ್ಥಳದಿಂದ ಓಡಿ ಹೋಗಿದ್ದಾನೆ. ಲಾರಿಯಲ್ಲಿದ್ದ ಸುಮಾರು ₹15,000 ಮೌಲ್ಯದ ಕಲ್ಲುಗಳನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಕೇಕ್, ಬಿಸ್ಕತ್ತು, ಕುಕೀಸ್ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಇದನ್ನೂ ಓದಿ:➤ ಲಿಂಗನಮಕ್ಕಿ ಡ್ಯಾಮ್ ನೀರಿನ ಮಟ್ಟ 3.90 ಅಡಿ ಹೆಚ್ಚಳ, ತುಂಗಾ ಡ್ಯಾಮ್ ಒಳಹರಿವು ಏರಿಕೆ, ಭದ್ರಾ ಸ್ಥಿತಿ ಹೇಗಿದೆ?