ಸಾಗರ, ಹೊಸನಗರ ತಾಲ್ಲೂಕಿನ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ವಿದ್ಯುತ್‌ ವ್ಯತ್ಯಯ: ಹೊಸನಗರ ಹಾಗೂ ಸಾಗರ ತಾಲ್ಲೂಕಿನ ವಿವಿಧೆಡೆ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಇಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೊಸನಗರದಲ್ಲಿ ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಹೊಸನಗರ ಪಟ್ಟಣ ವ್ಯಾಪ್ತಿಗೆ ಹೊಸ ಫೀಡರ್ ನಿರ್ಮಾಣ ಕಾಮಗಾರಿ ಹಾಗೂ 33 ಕೆ.ವಿ ವಿದ್ಯುತ್ ಮಾರ್ಗ ನಿರ್ವಹಣೆ ಮಾಡಲಾಗುತ್ತಿದೆ. ಇದರ ಪರಿಣಾಮ ಇಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಹೊಸನಗರ ಪಟ್ಟಣ ಸೇರಿದಂತೆ ಜೇನಿ, ಮಾರುತಿಪುರ, ರಾಮಚಂದ್ರಾಪುರ ಮಠ, ಮೇಲಿನ ಬೆಸಿಗೆ, ಸೊನಲೆ, ಎಂ.ಗುಡ್ಡೇಕೊಪ್ಪ ಹಾಗೂ ಕರಿಂಗೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕರೆಂಟ್ ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power Cut

ಸಾಗರದಲ್ಲಿಯು ವಿದ್ಯುತ್‌ ವ್ಯತ್ಯಯ

ಸಾಗರ ನಗರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಇಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಸಾಗರ ನಗರ ಸೇರಿದಂತೆ ಮಂಗಳಬೀಸು, ಮಾರಿಕಾಂಬ, ರಾಮನಗರ, ಮಾಲ್ವೆ, ಹೆಗ್ಗೋಡು, ಆವಿನಹಳ್ಳಿ, ವರದಹಳ್ಳಿ, ಬೊಮ್ಮತ್ತಿ, ಮಾಸೂರು, ಹಿರೇನೆಲ್ಲೂರೂ ಹಾಗೂ ಲಿಂಗದಹಳ್ಳಿ ಮುಂತಾದ ಮಾರ್ಗಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ